ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಜನವರಿ 2022
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಡಿಎಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಸಭೆಯಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ ಅವರು ಸರ್ಕಾರದ ಯೋಜನೆಗಳು, ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಿದರು.
ಸಚಿವರು ಹೇಳಿದ್ದೇನು?
♦ ಸ್ವಾತಂತ್ರ್ಯದ ಅಮೃತ ಮಹೋತ್ಸವಾದ ಅಂಗವಾಗಿ 14 ಅಮೃತ ಯೋಜನೆಗಳನ್ನು ಹೊಸದಾಗಿ ಘೋಷಿಸಲಾಗಿದ್ದು, ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕ್ರೀಡೆ, ಕೈಗಾರಿಕೆ ವಲಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಇದರ ಉದ್ದೇಶವಾಗಿದೆ.
♦ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಸಂಪರ್ಕ ರಸ್ತೆಗಳು, ಸೇತುವೆಗಳು, ನೂತನ ರೈಲು ಮಾರ್ಗ, ವಿಮಾನ ನಿಲ್ದಾಣ ಕಾಮಗಾರಿಗಳನ್ನು ನಿಗಧಿತ ಅವಧಿಯ ಒಳಗಾಗಿ ಪೂರ್ಣಗೊಳಿಸುವ ಪಣ ತೊಡಲಾಗಿದೆ.
♦ ಜಿಲ್ಲೆಯ 6 ತಾಲ್ಲೂಕುಗಳ ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಕುಸ್ತಿ ಮತ್ತು ವಾಲಿಬಾಲ್ ಕ್ರೀಡಾಪಟುಗಳಿಗಾಗಿ ಹಾಸ್ಟೆಲ್’ಗಳನ್ನು ಈ ವರ್ಷದಿಂದ ಶಿವಮೊಗ್ಗ ನಗರದಲ್ಲಿ ಪ್ರಾರಂಭಿಸಲಾಗುತ್ತಿದೆ.
♦ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸ್ವಚ್ಚ ಭಾರತ ಪರಿಕಲ್ಪನೆಯಡಿ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 5.29 ಕೋಟಿ ರೂ. ವೆಚ್ಚದಲ್ಲಿ 4409 ಶೌಚಾಲಯಗಳನ್ನು ನಿರ್ಮಿಸಲಾಗಿದೆ.
♦ ಜಿಲ್ಲೆಯಲ್ಲಿ ಬಸವ ವಸತಿ ಯೋಜನೆಯಡಿ 6451 ಮನೆಗಳು ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ 1989 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಅಮೃತ ವಸತಿ ಯೋಜನೆಯಡಿ 27 ಗ್ರಾಮ ಪಂಚಾಯತ್ ಗಳಲ್ಲಿ ಸ್ವಂತ ಮನೆ ಇಲ್ಲದ ಎಲ್ಲಾ ಫಲಾನುಭವಿಗಳಿಗೆ ಮನೆ ನೀಡುವ ಯೋಜನೆ ರೂಪಿಸಲಾಗಿದೆ.
♦ ಶಿವಮೊಗ್ಗ ನಗರಕ್ಕೆ 104 ಕೋಟಿ ರೂ. ವೆಚ್ಚದಲ್ಲಿ 24X7 ನಿರಂತರ ಕುಡಿಯುವ ನೀರು ಪೂರೈಸುವ ಯೋಜನೆ ಹಾಗೂ ಮಹಾನಗರ ಪಾಲಿಕೆ ಹೊರವಲಯದಲ್ಲಿರುವ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸುವ 96.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಈಗಾಗ ಚಲನೆ ನೀಡಲಾಗಿದೆ. ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು.
♦ ಜಲಜೀವನ್ ಮಿಷನ್ ಯೋಜನೆಯಡಿ 2024ರೊಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಯಡಿ ಇದುವರೆಗೆ ರೂ. 36.29 ಕೋಟಿ ವೆಚ್ಚದಲ್ಲಿ 334 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 33 ಕಾಮಗಾರಿಗಳು ಪ್ರಗತಿಯಲ್ಲಿವೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200