ಶಿವಮೊಗ್ಗಕ್ಕೆ ನಾಳೆ ಪೌರಾಡಳಿತ ಸಚಿವರ ಭೇಟಿ, ಮಹತ್ವದ ಮೀಟಿಂಗ್‌

SHIMOGA NEWS, 21 NOVEMBER 2024 : ಪೌರಾಡಳಿತ ಮತ್ತು ಹಜ್ ಸಚಿವ (Minister) ರಹೀಂ ಖಾನ್‌ ನ.22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಆಗಮಿಸಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ತಂಗಲಿದ್ದಾರೆ.

ಮಧ್ಯಾಹ್ನ 3ಕ್ಕೆ ಶಿವಮೊಗ್ಗ ಜಿಲ್ಲಾ ಇಂದಿರಾ ಕ್ಯಾಂಟೀನ್ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಜಿಲ್ಲಾ ಆಡಳಿತ ಭವನದಲ್ಲಿ ನಡೆಯುವ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.00ಕ್ಕೆ ಜಿಲ್ಲಾ ಕಾಂಗ್ರೇಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ. ಮುರಳಿಧರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 21, 2024 at 5:40 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 21, 2024

Leave a Comment