ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020
ಕರೋನ ಸಮಸ್ಯೆ ಇರುವ ಹೊತ್ತಿನಲ್ಲಿ ದೆಹಲಿಯ ನಿಜಾಮುದ್ದಿನ್ ಪ್ರದೇಶಕ್ಕೆ ಹೋಗುವ ಅವಶ್ಯಕತೆ ಇತ್ತಾ? ಅಷ್ಟಕ್ಕೂ ಸಭೆಯಲ್ಲಿ ಭಾಗವಹಿಸಿದವರೇನು ಸೂಸೈಡ್ ಬಾಂಬರ್’ಗಳಾ? ಅವರು ಸಾಯೋದಲ್ಲದೆ ಜನರು ಸಾಯಬೇಕು ಅಂತಾ ಯೋಚನೆ ಮಾಡಿದ್ದಾರಾ? ಹೀಗಂತ ಪ್ರಶ್ನಿಸಿದ್ದಾರೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ನಿಜಾಮುದ್ದಿನ್ ಪ್ರದೇಶದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದವರ ಪೈಕಿ, ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ 24 ಮಂದಿ ಪತ್ತೆಯಾಗಿದ್ದಾರೆ. ಈ ಪೈಕಿ ಮೂವರು ಚಿತ್ರದರ್ಗು, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗೆ ಸೇರಿದವರಾಗಿದ್ದಾರೆ. ಜಿಲ್ಲೆಯ 21 ಮಂದಿಯ ಪೈಕಿ 10 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರೆಲ್ಲರ ರಿಪೋರ್ಟ್ ನಗೆಟಿವ್ ಬಂದಿದೆ. ಉಳಿದ 11 ಜನರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರೋನ ಸಂದರ್ಭದಲ್ಲಿ ರಾಜಕೀಯ ಮತ್ತು ಧರ್ಮವನ್ನು ಎತ್ತಿಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ. ಈ ಸಮಯದಲ್ಲಿ ದೆಹಲಿಯ ನಿಜಾಮುದ್ದಿನ್ ಪ್ರದೇಶಕ್ಕೆ ಹೋಗುವ ಅವಶ್ಯಕತೆ ಇತ್ತೆ ಎಂದು ಪ್ರಶ್ನೆ ಮಾಡಿದರು.
ನಿಜಾಮುದ್ದಿನ್ ಸಮಸ್ಯೆ ಆಗದಿದ್ದರೆ ದೇಶ ಹಾಗೂ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗೋದು. ಆದರೆ ಕೆಲವರು ಆ ಸಭೆ ಸೇರಿಸಲೆಬೇಕು ಅಂತಾ ತೀರ್ಮಾನಿಸಿದ್ದರು. ಹೀಗಾದಾಗ ಯಾರು ಎನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಸಿಇಒ ವೈಶಾಲಿ, ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422