ಶಿವಮೊಗ್ಗಕ್ಕೆ ವೈದ್ಯಕೀಯ ಶಿಕ್ಷಣ ಸಚಿವ, ಮೂರು ದಿನ ಪ್ರವಾಸ, ಎರಡು ದಿನ ಡಿಸಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 9 JANUARY 2024

SHIMOGA : ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದ ಹಿನ್ನೆಲೆ ಪೂರ್ವಭಾವಿ ಸಿದ್ಧತೆಗಾಗಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಮೂರು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜ.10ರಂದು ಮಧ್ಯಾಹ್ನ 2.20ಕ್ಕೆ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಡೆಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲೆ ವಾಸ್ತವ್ಯ ಮಾಡಲಿದಾರೆ. ಜ.11ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಕ್ರಮದ ಕುರಿತು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ – ನೂರು ದಿನ ಕಳೆದರು ಉಪನ್ಯಾಸಕರ ಖಾತೆಗೆ ಬಾರದ ಗೌರವಧನ, ಕುವೆಂಪು ವಿವಿ ವಿರುದ್ಧ ಅಸಮಾಧಾನ

ಜ.12ರಂದು ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 9, 2024

Leave a Comment