ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಸಚಿವ ಮಧು ಬಂಗಾರಪ್ಪ ದುಂಡಾವರ್ತನೆ ಬಿಡಬೇಕು. ಶಿಷ್ಠಾಚಾರ ಗೊತ್ತಿಲ್ಲದೆ ಇದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಳಿ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹಾಲಪ್ಪ ಹೇಳಿದ 3 ಪ್ರಮುಖಾಂಶ
ಕೇಂದ್ರ ಸರ್ಕಾರದ ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ತಾಕೀತು ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆ. ಹೀಗಾಗಿ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅದನ್ನು ಸಹಿಸದೆ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿದ್ದಾರೆ.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಫಲಾನುಭವಿಗಳಿಗೆ ತಲುಪಿರುವ ಬಗ್ಗೆ ಹಾಗೂ ತಲುಪಿಸುವ ಬಗ್ಗೆಯೂ ವಿಕಸಿತ ಭಾರತ ಯಾತ್ರೆಯನ್ನು ಎಲ್ಲ ಗ್ರಾಪಂಗಳಲ್ಲಿ ನಡೆಸಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಾಗ ಯಾವುದೇ ಪಕ್ಷಪಾತ ಮಾಡುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿರುವ ಕ್ಯಾಬಿನೆಟ್ ಸಚಿವರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೆ.
ಇದನ್ನೂ ಓದಿ – ಪೆನ್ಸಿಲ್ ಲೆಡ್ನಲ್ಲಿ 1 ಸೆಂಟಿ ಮೀಟರ್ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?
ಸರ್ಕಾರಿ ನೌಕರರನ್ನು ವಿಕಸಿತ ಭಾರತ ಯಾತ್ರೆಗೆ ಕಳಿಸಿದಂತೆ ಜಿಲ್ಲಾ ಪಂಚಾಯಿತಿ ಸಿಇಒಗೆ ಸಚಿವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ಮಾಡುತ್ತೇವೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬಾರದೆಂದರೆ ಅದನ್ನು ಸಚಿವರು ಸ್ಪಷ್ಟಪಡಿಸಲಿ. ಸಚಿವ ಮಧು ಬಂಗಾರಪ್ಪ ದುಂಡಾವರ್ತನೆ ಬಿಡಬೇಕು. ಶಿಷ್ಠಾಚಾರ ಗೊತ್ತಿಲ್ಲದೆ ಇದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಳಿ ತಿಳಿದುಕೊಳ್ಳಲಿ. ಸಂಪುಟದಿಂದ ಮಧು ಬಂಗಾರಪ್ಪ ಅವರನ್ನು ಕೂಡಲೆ ಕೈಬಿಡಬೇಕು.
ಇದನ್ನೂ ಓದಿ – ಇನ್ಮುಂದೆ ಶಿವಮೊಗ್ಗದ ಫ್ರೀಡಂ ಪಾರ್ಕ್ಗೆ ಹೊಸ ಹೆಸರು, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಡಾ. ರಾಜನಂದಿನಿ ಕಾಗೋಡು ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.