ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 26 SEPTEMBER 2024 : ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೋಚಿಂಗ್ ಟರ್ಮಿನಲ್‌ಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದರು. ಸಂಸದ ರಾಘವೇಂದ್ರ ಅವರೊಂದಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಒಟ್ಟು 74 ಎಕರೆ ವಿಸ್ತೀರ್ಣದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್ ಕಾಮಗಾರಿ ನಡೆಯುತ್ತಿದೆ.
ಇನ್ನೊಂದು ವರ್ಷದಲ್ಲಿ ಕಾಮಗಾರಿ ಪೂರ್ಣ
ಇದೇ ವೇಳೆ ಮಾತನಾಡಿದ ಸಚಿವ ಸೋಮಣ್ಣ ಅವರು, ಮುಂದಿನ ವರ್ಷದ ಈ ಹೊತ್ತಿಗೆ ಕೋಟೆಗಂಗೂರಿನಲ್ಲಿ ಕೋಚಿಂಗ್ ಟರ್ಮಿನಲ್ (Terminal) ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದೇನೆ. 50 ವರ್ಷದ ಹಿಂದೆ ಶಿವಮೊಗ್ಗದಲ್ಲಿ ಟರ್ಮಿನಲ್ ನಿರ್ಮಾಣವಾಗಿದ್ದರೆ ಇಲ್ಲಿಯ ಚಿತ್ರಣವೇ ಬೇರೆಯಾಗಿರುತ್ತಿತ್ತು ಎಂದರು.
ರೈತರ ಓಡಾಟಕ್ಕೆ ವ್ಯವಸ್ಥೆ
ಕೋಟೆ ಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಜಾಗ ನೀಡಿದವರು ಮತ್ತು ಮತ್ತೊಂದು ಬದಿಯ ತೋಟ, ಗದ್ದೆಗೆ ಓಡಾಡಲು ರೈತರಿಗೆ ಅನುಕೂಲ ಆಗುವಂತೆ ವ್ಯವಸ್ಥೆ ಮಾಡಬೇಕು ಸ್ಥಳೀಯರು ಮನವಿ ಮಾಡಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವ ಸೋಮಣ್ಣ, ಜನ, ಜಾನುವಾರುಗಳ ಓಡಾಟಕ್ಕೆ ರೈಲ್ವೆ ಮಲ್ಸೇತುವೆ ನಿರ್ಮಿಸಬೇಕಿದೆ. ಅದರ ಕುರಿತು ಪರಿಶೀಲಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಇದಕ್ಕೂ ಮೊದಲು ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿಯನ್ನು ಸಚಿವ ಸೋಮಣ್ಣ ಪರಿಶೀಲನೆ ನಡೆಸಿದರು. ಶಾಸಕರು, ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ » ಮಂಗಳೂರಿನಿಂದ ಶಿವಮೊಗ್ಗಕ್ಕೆ ಬಸ್ಸಲ್ಲಿ ಬಂದಿಳಿದ ವ್ಯಕ್ತಿಗೆ ಕಾದಿತ್ತು ಶಾಕ್