SHIVAMOGGA LIVE NEWS | 3 NOVEMBER 2023
SHIMOGA : ಜಿಲ್ಲೆಯಲ್ಲಿ ಕೈಗಾರಿಕೆಗಳ (Industries) ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲು ಸಿದ್ಧ. ಅಲ್ಲದೆ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗು ಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಉದ್ದಿಮೆದಾರರು ಮತ್ತು ಕೈಗಾರಿಕೋದ್ಯಮಿಗಳ ಜೊತೆ ಸಚಿವ ಮಧು ಬಂಗಾರಪ್ಪ ಸಂವಾದ ನಡೆಸಿದರು.
ಮಿನಿಸ್ಟರ್ ತಿಳಿಸಿದ 3 ಪ್ರಮುಖಾಂಶ
ಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಕೊರತೆ ಅಥವಾ ಇನ್ನಾವುದೋ ಕಾರಣಕ್ಕೆ ಕೈಗಾರಿಕೋದ್ಯಮ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ. ಕೈಗಾರಿಕೆಗಳು ಬೆಳೆಯಲು ಅಗತ್ಯವಾದ ಮೂಲ ಸೌಕರ್ಯ, ರಸ್ತೆ, ವಿಮಾನ ನಿಲ್ದಾಣ ಸೇರಿದಂತೆ ಎಲ್ಲ ಸೌಲಭ್ಯವಿದೆ. ಇದರ ಬಳಕೆ ಆಗಬೇಕು.
ಕೈಗಾರಿಕೆ ಬೆಳೆದಷ್ಟು ಉದ್ಯೋಗ ಸೃಷ್ಟಿ, ಆರ್ಥಿಕ ಅಭಿವೃದ್ದಿ ಆಗಲಿದೆ. ಉದ್ದಿಮೆದಾರರು, ಕೈಗಾರಿಕೋದ್ಯಮಿಗಳು ಸಲಹೆ ನೀಡಿದಲ್ಲಿ ಅನುಕೂಲ. ಸದ್ಯ ಈಗ ವಿದ್ಯುತ್ ಸಮಸ್ಯೆ ಇದೆ. ರೈತರಿಗೆ ವಿದ್ಯುತ್ ಕೊಡಬೇಕು. ಇಲ್ಲವಾದಲ್ಲಿ ರೈತರ ಫ್ಯಾಕ್ಟರಿ ನಿಂತು ಉತ್ಪಾದನೆ ಕಡಿಮೆ ಆಗುತ್ತದೆ. ಆರ್ಥಿಕವಾಗಿ ಹಿಂದುಳಿಯುತ್ತೇವೆ.
ಉತ್ತಮ ಶಾಲೆಗಳಿವೆ ಎಂದು ಜನ ಬೆಂಗಳೂರಿಗೆ ಹೋಗುತ್ತಾರೆ. ಇಲ್ಲಿಯೇ ಉತ್ತಮ ಶಿಕ್ಷಣ ಸಂಸ್ಥೆಗಳಾದರೆ ಜನ ಬೆಂಗಳೂರಿಗೆ ಹೋಗುವುದು ತಪ್ಪುತ್ತದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತನಾಗಿದ್ದೇನೆ. ಅದೇ ರೀತಿಯಲ್ಲಿ ಕೈಗಾರಿಕೆಯನ್ನೂ ಬೆಳೆಸೋಣ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಮಾಯಣ್ಣಗೌಡ, ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷ ವಾಸುದೇವ, ಕಾರ್ಯದರ್ಶಿ ವಸಂತ ಹೋಬಳಿದಾರ್, ಜಂಟಿ ಕಾರ್ಯದರ್ಶಿ ವಿಜಯಕುಮಾರ್, ಅಶ್ವಥನಾರಾಯಣ, ಸಂಯೋಜಕ ಸಂಘದ ಪದಾಧಿಕಾರಿಗಳು, ಕೈಗಾರಿಕೋದ್ಯಮಿಗಳು ಹಾಜರಿದ್ದರು.
ಇದನ್ನೂ ಓದಿ – ಸೊರಬದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನತಾ ದರ್ಶನಕ್ಕೆ ದಿನಾಂಕ ಫಿಕ್ಸ್, ಎಲ್ಲಿ ನಡೆಯುತ್ತೆ ಜನತಾ ದರ್ಶನ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200