ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು (Airport) ರಾಜ್ಯ ಸರ್ಕಾರಕ್ಕೆ ನಿರ್ವಹಣೆಗೆ ನೀಡಬಾರದಾಗಿತ್ತು ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಿನಿಸ್ಟರ್ ಹೇಳಿದ್ದೇನು?
ರಾಜ್ಯ ಸರ್ಕಾರ ಬೆವರು ಸುರಿಸಿ ಸಂಗ್ರಹಿಸಿದ ತೆರಿಗೆ ಹಣದಿಂದ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಹಾಗಿದ್ದ ಮೇಲೆ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರಕ್ಕೆ ಯಾಕೆ ನೀಡಬೇಕು? ಇದನ್ನು ಅದಾನಿಯಂತಹ ಖಾಸಗಿ ಸಂಸ್ಥೆಗೆ ನೀಡಬೇಕಿತ್ತೇ? ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು.
ವಿಮಾನ ನಿಲ್ದಾಣ ಉದ್ಘಾಟನೆಯಾದಾಗ ನೈಟ್ ಲ್ಯಾಂಡಿಂಗ್ ಯಾಕೆ ಇರಲಿಲ್ಲ? ಆಗ ಈ ವ್ಯವಸ್ಥೆ ಅಗತ್ಯವಿದೆ ಎಂದು ಸಂಸದರಿಗೆ ಗೊತ್ತಿರಲಿಲ್ಲವೇ? ಈಗ ನಮ್ಮ ಸರ್ಕಾರ ಬಂದ ಮೇಲೆ ನೈಟ್ ಲ್ಯಾಂಡಿಂಗ್‌ಗೆ ಅಗತ್ಯವಾದ ಉಪಕರಣಗಳು ಬಂದಿದೆ. ಅವುಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಿದಾಗ ಒಂದಾದರೂ ವಾಣಿಜ್ಯ ವಿಮಾನ ಬಂದಿತ್ತೇ? ನಮ್ಮ ಸರ್ಕಾರ ಬಂದ ನಂತರವೇ ಶಿವಮೊಗ್ಗದಲ್ಲಿ ವಾಣಿಜ್ಯ ವಿಮಾನಗಳು ಸಂಚರಿಸುತ್ತಿವೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿಬಿಟ್ಟೆ’, ಸಂಸದ ರಾಘವೇಂದ್ರ ಬೇಸರ

Minister Speaks about Shimoga airport
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





