ಶಿವಮೊಗ್ಗದಲ್ಲಿ ಅದ್ಧೂರಿ ಗಣರಾಜ್ಯೋತ್ಸವ, ಮಿನಿಸ್ಟರ್‌ ಸಂದೇಶದಲ್ಲಿ ಏನೆಲ್ಲ ಇತ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ಗಣರಾಜ್ಯೋತ್ಸವ (Republic Day) ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋ ಏರಿದ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ

ಇದೇ ವೇಳೆ ಸಚಿವ ಮಧು ಬಂಗಾರಪ್ಪ ಪರೇಡ್‌ನಲ್ಲಿ ಭಾಗವಹಿಸಿದ್ದ ತುಕಡಿಗಳ ಪರಿಶೀಲನೆ ನಡೆಸಿದರು. ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದರು.

ಮಿನಿಸ್ಟರ್‌ ಏನೆಲ್ಲ ಹೇಳಿದರು?

1ಆರ್ಥಿಕ ನೆರವು: ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಒಟ್ಟು ₹3,024 ಕೋಟಿ ತಲುಪಿಸುವ ಮೂಲಕ ಜನರ ಆರ್ಥಿಕ ಶಕ್ತಿ ಹೆಚ್ಚಿಸಲಾಗಿದೆ.

2 ಆರೋಗ್ಯ ಮೂಲಸೌಕರ್ಯ: ಮೆಗ್ಗಾನ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದ್ದು, ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ, ಹೈಟೆಕ್ ಶವಾಗಾರ ಮತ್ತು ಟ್ರಾಮಾ ಸೆಂಟರ್ ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿವೆ.

3 ನಗರಾಭಿವೃದ್ಧಿ: ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಹಂತ-2 ಅಡಿ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳ ಅಭಿವೃದ್ಧಿಗೆ ₹127.50 ಕೋಟಿ ಅನುಮೋದಿಸಲಾಗಿದೆ.

f5
4 ಪ್ರವಾಸೋದ್ಯಮ ಮತ್ತು ಸಂಸ್ಕೃತಿ: ಬಂಗಾರಧಾಮ ಸೇರಿದಂತೆ ಜಿಲ್ಲೆಯ 64 ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಗುಡವಿ ಪಕ್ಷಿಧಾಮವನ್ನು PPP ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು.

5 ಸಂವಿಧಾನದ ಅರಿವು: ರಾಜ್ಯದ ಒಂದು ಕೋಟಿಗೂ ಹೆಚ್ಚು ಮಕ್ಕಳು ಪ್ರತಿದಿನ ಶಾಲೆಯಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ.

Republic-Day-Flag-Hoisting-in-Shivamogga-Nehru-Stadium.
6 ಪರೀಕ್ಷಾ ಸುಧಾರಣೆ ಮತ್ತು ಪೌಷ್ಟಿಕಾಂಶ: ಮಕ್ಕಳ ಮೇಲಿನ ಒತ್ತಡ ಕಡಿಮೆ ಮಾಡಲು ಮೂರು ಪರೀಕ್ಷಾ ಪದ್ಧತಿ ಜಾರಿಗೆ ತರಲಾಗಿದೆ ಹಾಗೂ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಲಾಗುತ್ತಿದೆ.

7 ಕೆಪಿಎಸ್ ಮತ್ತು ಮೂಲಸೌಕರ್ಯ: ರಾಜ್ಯದ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ ಶಿವಮೊಗ್ಗ ಜಿಲ್ಲೆಗೆ 19 ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಅಲ್ಲದೆ, ಶಾಲೆಗಳ ದುರಸ್ತಿಗೆ ₹500 ಕೋಟಿ ವೆಚ್ಚ ಮಾಡಲಾಗುತ್ತಿದೆ.ಶಿಕ್ಷಕರ ನೇಮಕಾತಿ: ಗುಣಮಟ್ಟದ ಶಿಕ್ಷಣಕ್ಕಾಗಿ ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶಿಕ್ಷಕರ ಕೊರತೆ ನೀಗಿಸಲು 51,000 ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ.

8 ಶಿಕ್ಷಕರ ನೇಮಕಾತಿ: ಗುಣಮಟ್ಟದ ಶಿಕ್ಷಣಕ್ಕಾಗಿ ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶಿಕ್ಷಕರ ಕೊರತೆ ನೀಗಿಸಲು 51,000 ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ.

Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.
Republic-Day-Flag-Hoisting-in-Shivamogga-Nehru-Stadium.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 26, 2026

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment