ಶಿವಮೊಗ್ಗಕ್ಕೆ ಶಿಕ್ಷಣ ಸಚಿವರ ಭೇಟಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಮಹತ್ವದ ಮೀಟಿಂಗ್, ಸಿದ್ಧತೆ ಹೇಗಿರಬೇಕು? ಮಿನಿಸ್ಟರ್ ಸೂಚನೆಗಳೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020

ಜೂನ್ 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಅವರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಮಕ್ಕಳ ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆ. ರಾಜ್ಯ ಹೈಕೋರ್ಟ್‍ಗೆ ಈ ಕುರಿತು ಸರ್ಕಾರ ಹೇಳಿಕೆ ಸಲ್ಲಿಸಿದ್ದು, ಅದರ ಪ್ರಕಾರ ಪರೀಕ್ಷೆಯನ್ನು ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ಹಾಲ್‍ನಲ್ಲಿ 18ಕ್ಕಿಂತ ಹೆಚ್ಚು ಮಕ್ಕಳು ಇರಬಾರದು. ಮಾರ್ಗಸೂಚಿ ಪ್ರಕಾರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಮಕ್ಕಳು ಹಾಲ್ ಟಿಕೇಟ್ ಪಡೆಯಲು ಬರುವ ಸಂದರ್ಭದಲ್ಲಿಯೇ ಮಾಸ್ಕ್ ಒದಗಿಸಬೇಕು. ಪರೀಕ್ಷೆ ಮುಗಿದ ಬಳಿಕ ಮಕ್ಕಳು ಗುಂಪಾಗಿ ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ದಿನ ಪ್ರತಿ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ಮಾಡಲಾಗುವುದು. ಅನಾರೋಗ್ಯ ಲಕ್ಷಣ ಇರುವ ಮಕ್ಕಳನ್ನು ಮೊದಲೇ ನಿಗದಿಪಡಿಸಿದ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಎಲ್ಲಾ ಶಾಲೆಗಳಿಗೆ ಈಗಾಗಲೇ ಸ್ಯಾನಿಟೈಸರ್ ಒದಗಿಸಲಾಗಿದೆ ಎಂದರು.

ಎರಡು ದಿನ ಮೊದಲೇ ಸ್ಯಾನಿಟೈಜೇಶನ್

ಪರೀಕ್ಷೆ ಆರಂಭವಾಗುವ ಎರಡು ದಿನಗಳ ಮೊದಲು ಇಡೀ ಪರೀಕ್ಷಾ ಕೇಂದ್ರದ ಸ್ಯಾನಿಟೈಜೇಶನ್ ಮಾಡಬೇಕು. ಪರೀಕ್ಷೆ ಮುಗಿದ ಬಳಿಕ ಪ್ರತಿದಿನ ಇದನ್ನು ಪುನರಾವರ್ತಿಸಬೇಕು. ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸಹ ಎಲ್ಲಾ ಮುನ್ನೆಚ್ಚರಿಕೆ ವಹಿಸಬೇಕು. ಅವರು ಹೆಚ್ಚುವರಿಯಾಗಿ ಗ್ಲೌಸ್ ಧರಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಕುಡಿಯುವ ನೀರು ತೆಗೆದುಕೊಂಡು ಬರುವಂತೆ ಸೂಚನೆ ನೀಡಬೇಕು. ಮಧ್ಯಾಹ್ನ ಬಿಸಿಯೂಟ ಒದಗಿಸುವ ಕುರಿತು ಸ್ಥಳೀಯವಾಗಿಯೇ ನಿರ್ಧಾರ ಕೈಗೊಳ್ಳಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಶಾಲಾ ಕೊಠಡಿಯಲ್ಲಿ ಬಿಸಿಯೂಟ ನೀಡಬಾರದು. ಒಟ್ಟು ಯಾವುದೇ ಕಾರಣಕ್ಕೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದರು.

103415208 1139886426372776 1478104869346310568 n.jpg? nc cat=111& nc sid=110474& nc ohc=QiUChYvOGiAAX mlDn& nc ht=scontent.fblr1 4

ಚಂದನ ಟಿವಿಯಲ್ಲಿ ಪುನರ್ ಮನನ ತರಗತಿ

ಚಂದನ ವಾಹಿನಿ ಮೂಲಕ ಈಗಾಗಲೇ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಜೂನ್ 12 ರಿಂದ 17ರವರೆಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಹಳೆ ಪ್ರಶ್ನೆ ಪತ್ರಿಕೆ ಆಧಾರಿತ ಪುನರ್ ಮನನ ತರಗತಿಗಳು ನಡೆಯಲಿವೆ. ಕೋವಿಡ್-19 ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆ ಬದಲಾಗಿದ್ದು, ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಟಿವಿ ಮಾಧ್ಯಮದ ಮೂಲಕ ಕಲಿಕೆ ಕ್ರಮ ಆರಂಭಿಸುವ ಕುರಿತು ಚಿಂತಿಸಲಾಗುತ್ತಿದೆ ಎಂದು ಹೇಳಿದರು.

LKG, UKGಗೆ ಆನ್‍ಲೈನ್ ತರಗತಿ ಅವೈಜ್ಞಾನಿಕ

ಈಗ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ತರಗತಿಗಳನ್ನು ಆರಂಭಿಸಿವೆ. ಈ ಕುರಿತು ಸ್ಪಷ್ಟ ಮಾರ್ಗಸೂಚಿ ಸಿದ್ಧಪಡಿಸುವ ಉದ್ದೇಶದಿಂದ ನಿಮ್ಹಾನ್ಸ್ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ನಾಳೆ ಅಂತಿಮ ಹಂತದ ಸಮಾಲೋಚನೆ ನಡೆಯಲಿದ್ದು, ಆ ಬಳಿಕ ಸ್ಪಷ್ಟ ನಿರ್ಧಾರ ಪ್ರಕಟಿಸಲಾಗುವುದು. ಎಲ್‍ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಆನ್‍ಲೈನ್ ತರಗತಿ ನಡೆಸುವುದು ಅವೈಜ್ಞಾನಿಕ ಮಾತ್ರವಲ್ಲ ಅಮಾನವೀಯವಾಗಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಂಟೈನ್‍ಮೆಂಟ್ ವಲಯದಲ್ಲಿ ಪರೀಕ್ಷಾ ಕೇಂದ್ರ ಇರಬಾರದು

ಕಂಟೈನ್‍ಮೆಂಟ್ ವಲಯದಲ್ಲಿ ಯಾವುದೇ ಪರೀಕ್ಷಾ ಕೇಂದ್ರ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಒಂದು ವೇಳೆ ಪರೀಕ್ಷೆ ಆರಂಭವಾದ ಬಳಿಕ ಕಂಟೈನ್‍ಮೆಂಟ್ ವಲಯ ಘೋಷಣೆಯಾದರೆ, ಅಂತಹ ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆ ಸಂದರ್ಭದಲ್ಲಿ ಅವಕಾಶ ನೀಡಲಾಗುವುದು. ಅವರನ್ನು ಹೊಸ ವಿದ್ಯಾರ್ಥಿಗಳೆಂದೇ ಪರಿಗಣಿಸಲಾಗುವುದು ಎಂದರು.

ಮೂರು ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಮ್ಮ ಜಿಲ್ಲೆಗಳಲ್ಲಿ ಕೈಗೊಂಡಿರುವ ಪೂರ್ವಸಿದ್ಧತೆಗಳ ಮಾಹಿತಿ ನೀಡಿದರು. ಶಾಸಕ ಅರಗ ಜ್ಞಾನೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸಿಇಒ ಎಂ.ಎಲ್.ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 9, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment