ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 AUGUST 2023
SHIMOGA : ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ (Permanent Solution) ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಈ ವೇಳೆ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆ ನೀಡಿದರು.
ಏನೆಲ್ಲ ಸೂಚನೆ ಕೊಟ್ಟರು?
ಸೂಚನೆ 1 : ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉತ್ಸುಕರಾಗಿದ್ದಾರೆ. ಈ ಹಿನ್ನೆಲೆ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು.
ಇದನ್ನೂ ಓದಿ – ‘ವಿಐಎಸ್ಎಲ್ ವಿಚಾರ ಚುನಾವಣೆ ಗಿಮಿಕ್’, ಶಾಶ್ವತ ಕಾರ್ಯಕ್ರಮ ಪ್ರಕಟಿಸುವಂತೆ ಒತ್ತಾಯಿಸಿದ ಮಿನಿಸ್ಟರ್
ಸೂಚನೆ 2 : ಸಾಗುವಳಿದಾರರು, ವಸತಿ ವ್ಯವಸ್ಥೆ ಕಲ್ಪಿಸಿಕೊಂಡವರನ್ನು ಒಕ್ಕಲೆಬ್ಬಿಸುವ ಮೊದಲು ಅವರ ಬಳಿ ಇರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಅಲ್ಲದೆ ಕಂದಾಯ ಇಲಾಖೆ ದಾಖಲೆಗಳಲ್ಲಿಯು ಬದಲಾವಣೆ ಮಾಡಬೇಕು.
ಸೂಚನೆ 3 : ಶರಾವತಿ ಸಂತ್ರಸ್ತರ ವಿರುದ್ಧ ಯಾವುದೆ ಕ್ರಮ ಕೈಗೊಳ್ಳುವ ಮೊದಲು ಸಂತ್ರಸ್ತರ ಹೋರಾಟ ಸಮಿತಿ ಸದಸ್ಯರ ಜೊತೆ ಚರ್ಚೆ ನಡೆಸಿ ಸಲಹೆ ಪಡೆದುಕೊಳ್ಳಬೇಕು.
ಸೂಚನೆ 4 : ಸೊರಬ ತಾಲೂಕು ಶಿಡ್ಡಿಹಳ್ಳಿಯಲ್ಲಿ 140 ಜನರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗಿದೆ. ಈ ಕ್ರಮ ಸರಿಯಲ್ಲ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದನ್ನು ಪುನರ್‌ಪರಿಶೀಲಿಸಿ ಮೊಕದ್ದಮೆ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಲೋಖಂಡೆ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ, ಹೋರಾಟ ಸಮಿತಿ ಮುಖಂಡ ಬಿ.ಎ.ರಮೇಶ್ ಹೆಗ್ಡೆ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.
.jpeg)
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





