ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 05 ಡಿಸೆಂಬರ್ 2019
ಶಿವಮೊಗ್ಗ ನಗರದ ಎಲ್ಲ ಕಡೆಯೂ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಗುಂಡಿ ಮುಚ್ಚೋಕೆ ಆಗಲ್ಲ ಎಂದರೆ ಮಹಾನಗರ ಪಾಲಿಕೆಗೆ ಏನು ಅರ್ಥವಿದೆ. ಈ ತಿಂಗಳ ಅಂತ್ಯದೊಳಗೆ ಎಲ್ಲ ರಸ್ತೆಗಳ ಗುಂಡಿಗಳನ್ನೂ ಮುಚ್ಚಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಪ್ರಗತಿ ಪರಿಶೀಲನೆ ನಡೆಸಿ, ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಎಷ್ಟು ತಿಂಗಳು ಬೇಕು? ಈ ಹಿಂದೆ ಅನುದಾನ ಇಲ್ಲ ಎನ್ನುತ್ತಿದ್ದೀರಿ. ಈಗ ಅನುದಾನ ನೀಡಿದರೆ ಕೆಲಸ ಮಾಡಲು ಸಮಸ್ಯೆಯೇನು ಎಂದು ನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಹಾಗೂ ಸ್ಮಾರ್ಟ್‌ಸಿಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸುಮ್ಮನೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ. ರಸ್ತೆಗಳ ಗುಂಡಿ ಮುಚ್ಚಲು ಹಿಂದಿನ ಸಭೆಗಳಲ್ಲೇ ಸೂಚಿಸಿದ್ದೆ. ಎಷ್ಟು ರಸ್ತೆಗಳ ಗುಂಡಿ ಮುಚ್ಚಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಉತ್ತರ ನೀಡಲು ತಡಬಡಾಯಿಸಿದ ಅಧಿಕಾರಿಗಳ ವಿರುದ್ಧ ಈಶ್ವರಪ್ಪ ಆಕ್ರೋಶ ಹೊರಹಾಕಿ ತಿಂಗಳ ಅಂತ್ಯದ ಗಡುವು ನೀಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
District In-charge minister K S Eshwarappa has urged the officials to close all the pot holes in a month. Shimoga City has witnessed major pot holes.