ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JANUARY 2024
SHIMOGA : ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ್ದರು.
ಕಾರ್ಯಕ್ರಮದ ವೇದಿಕೆ ಸೇರಿದಂತೆ ಪೆಂಡಾಲ್ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೆ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಡಾ.ಸಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಕಾಲೇಜು ಪ್ರಾಚಾರ್ಯರಿಗೆ ಸೂಚನೆ
ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ನೆರವಾಗಿ ಎಂದು ಜಿಲ್ಲೆಯ ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಪ್ರಾಚಾರ್ಯರಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೂಚಿಸಿದರು.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ದಿಢೀರ್ ರದ್ದು, ಟರ್ಮಿನಲ್‌ನಲ್ಲೇ ಪ್ರಯಾಣಿಕರ ಪ್ರತಿಭಟನೆ, ಅಧಿಕಾರಿಗಳಿಗೆ ತರಾಟೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳು ಚಾಲನಾ ಕಾರ್ಯಕ್ರಮಕ್ಕೆ ಬರುವಂತಾಗಬೇಕು. ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ನೆರೆಯ ಜಿಲ್ಲೆಯ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






