SHIVAMOGGA LIVE NEWS, 18 JANUARY 2025
ಶಿವಮೊಗ್ಗ : ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರಕ್ಕೆ (Corruption) ಕಡಿವಾಣ ಹಾಕಲು ಕ್ರಮ ವಹಿಸುತ್ತೇವೆ. ತಪ್ಪೆಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿದ್ದಾರೆ. ಇ ಸ್ವತ್ತು ವಿಚಾರದಲ್ಲಿ ಗೊಂದಲ ನಿವಾರಣೆಗೆ ಕ್ರಮ ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಕುರಿತು ಜನಪ್ರತಿನಿಧಿಗಳು ಆರೋಪ ಮಾಡಿದ್ದರು. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ಕೂಡ ಇಂದು ಬೆಳಗ್ಗೆ ವರದಿ ಪ್ರಕಟಿಸಿತ್ತು.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ, ಕೈ ಬಿಸಿ ಮಾಡಿದರಷ್ಟೆ ಕೆಲಸ, ಏನಾಗ್ತಿದೆ ಪೌರ ಸಂಸ್ಥೆಯಲ್ಲಿ?