ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 OCTOBER 2023
SHIMOGA : ಶಾಂತಿ ಭಂಗಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನು ಮುರಿಯುವ ವ್ಯಕ್ತಿಗಳ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎಚ್ಚರಿಸಿದ್ದಾರೆ.
ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿ ಸೌಂದರ್ಯ ಮತ್ತು ಸಾಮರಸ್ಯಕ್ಕೆ ಹೆಸರಾಗಿದೆ. ಜಿಲ್ಲೆಯಲ್ಲಿ ಎಲ್ಲ ವರ್ಗದವರು ಶಾಂತಿ, ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಅದರಂತೆ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿಯುತವಾಗಿ ನೆರವೇರಿದೆ. ಆದರೆ ಈದ್ ಮಿಲಾದ್ ಹಬ್ಬದಂದು ಅಹಿತಕರ ಘಟನೆ ನಡೆದಿರುವುದು ವಿಷಾದನೀಯ ಎಂದು ತಿಳಿಸಿದರು.
ಇದನ್ನೂ ಓದಿ – ‘ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ’, ಕಲ್ಲು ತೂರಾಟ ಕೇಸ್ನಲ್ಲಿ ಈತನಕ ಅರೆಸ್ಟ್ ಆದವರೆಷ್ಟು?
ಯಾರೇ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುವುದು, ಕಾನೂನು ಕೈಗೆತ್ತಿಕೊಳ್ಳುವುದು ಖಂಡನೀಯ. ಕಿಡಿಗೇಡಿಗಳನ್ನು ಹಿಡಿದು ಕಾನೂನಿನ ಸುಪರ್ದಿಗೆ ಒಪ್ಪಿಸಬೇಕು. ಶಾಂತಿ ಭಂಗ ಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನನ್ನು ಮುರಿಯುವವರ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಮ್ಮ ಜಿಲ್ಲೆಯಲ್ಲಿ ಇಂತಹ ಯಾವುದೇ ಕೃತಕ್ಕೆ ಅವಕಾಶವಿಲ್ಲ. ಜನರು ಶಾಂತಿ ಕಾಪಾಡಬೇಕು ಎಂದು ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422