ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಯುವನಿಧಿ ಯೋಜನೆ ಚಾಲನೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ಯುವ ಜ್ಯೋತಿ ಜಾಥಾ ಆಯೋಜಿಸಲಾಗಿತ್ತು. ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಮತ್ತು ಮಧು ಬಂಗಾರಪ್ಪ ಪಂಜು ಹಿಡಿದು ಜಾಥಾದಲ್ಲಿ ಪಾಲ್ಗೊಂಡಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜೈಲ್ ರಸ್ತೆಯಿಂದ ಗೋಪಿ ಸರ್ಕಲ್‌ವರೆಗೆ ಜಾಥಾ ನಡೆಯಿತು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ನೇತೃತ್ವದಲ್ಲಿ ಜಾಥಾ ನಡೆಸಲಾಯಿತು.
ಸಚಿವರು ಹೇಳಿದ್ದೇನು?
ಡಾ. ಶರಣ ಪ್ರಕಾಶ್ ಪಾಟೀಲ್ : ಯುವನಿಧಿ ಯೋಜನೆ ಕುರಿತು ಜಾಗೃತಿ ಮೂಡಿಸುವ ಆಶಯದಿಂದ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಘಟಕ ಯುವ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲಾ ಮಟ್ಟದಲ್ಲಿ ಸಂಘಟನೆ ಉತ್ತಮ ಕೆಲಸ ಮಾಡುತ್ತಿದೆ.
ಇದನ್ನೂ ಓದಿ – ‘ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ., ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ʼ
ಮಧು ಬಂಗಾರಪ್ಪ : ಜ.12ರಂದು ಸಿಎಂ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಫಲಾನುಭವಿಗಳು ಹಾಗೂ ಪದವಿ ವಿದ್ಯಾರ್ಥಿಗಳು ಯೋಜನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ ಪಾರ್ಕಿಂಗ್ ನಿಷೇಧ, ಎಲ್ಲೆಲ್ಲಿ?
ಕಾಂಗ್ರೆಸ್ ಮುಖಂಡರಾದ ರಮೇಶ್ ಹೆಗ್ಡೆ, ಆರ್.ಪ್ರಸನ್ನಕುಮಾರ್, ಮಧುಸೂದನ್, ಕೆ.ಚೇತನ್, ಚರಣ್, ಹರ್ಷಿತ್, ರವಿ ಕಾಟಿಕೇರೆ, ಕಲೀಂ ಪಾಷಾ, ದೇವೇಂದ್ರಪ್ಪ, ಸಂತೆ ಕುಡೂರು ವಿಜಯ್, ಧೀರಜ್, ರಂಗೇಗೌಡರು ಮತ್ತಿತರರು ಪಾಲ್ಗೊಂಡಿದ್ದರು.