ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಅಪ್ರಾಪ್ತನ ಕೈಗೆ ಬೈಕ್ (BIKE) ಕೊಟ್ಟಿದ್ದ ತಂದೆಗೆ ಶಿವಮೊಗ್ಗದ ನ್ಯಾಯಾಲಯ ಬಿಸಿ ಮುಟ್ಟಿಸಿದೆ. 25 ಸಾವಿರ ರೂ. ದಂಡ (FINE) ವಿಧಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಅಶೋಕ ಹೊಟೇಲ್ ಬಳಿ ಸಂಚಾರ ಠಾಣೆ (TRAFFIC POLICE) ಪಿಎಸ್ಐ ತಿರುಮಲೇಶ್ ಆಗಸ್ಟ್ 12ರಂದು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅಪ್ರಾಪ್ತ ಬಾಲಕನೊಬ್ಬ ಬೈಕ್ ಚಾಲಯಿಸುತ್ತಿರುವುದು ಪತ್ತೆಯಾಗಿದೆ. ಅಪ್ರಾಪ್ತನಿಗೆ ವಾಹನ ಚಲಾಯಿಸಲು ನೀಡಿದ್ದರಿಂದ ಆತನ ತಂದೆ ವಿರುದ್ಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್ ಸವಾರನಿಗೆ 25 ಸಾವಿರ ರೂ. ದಂಡ, ವೈರಲ್ ಆಯ್ತು ನೊಟೀಸ್
ಈ ಸಂಬಂಧ 4ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಅಪ್ರಾಪ್ತನ ಕೈಗೆ ಬೈಕ್ ಚಲಾಯಿಸಲು ನೀಡಿದ ಕ್ಲಾರ್ಕ್ ಪೇಟೆಯ ಓಂ ಪ್ರಕಾಶ್ಗೆ 25 ಸಾವಿರ ರೂ. ದಂಡ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.