ಶಿವಮೊಗ್ಗದಲ್ಲಿ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ನಡುರಾತ್ರಿ ಬೆಂಕಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | FIRE | 4 ಜೂನ್ 2022

ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸುಟ್ಟು ಕರಕಲಾಗಿದೆ.

Shimoga Nanjappa Hospital

ಹೊಸಮನೆಯ ಪ್ರಕಾಶ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕಿಗೆ ಮಿಳಘಟ್ಟದಲ್ಲಿ ಬೆಂಕಿ ಹಚ್ಚಲಾಗಿದೆ.

ಘಟನೆಯ ವಿವರ

ಪ್ರಕಾಶ್ ಅವರು ಹೂವಿನ ವ್ಯಾಪಾರ ಮಾಡುತ್ತಾರೆ. ಮಿಳಘಟ್ಟದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಕೆಲಸ ಮುಗಿಸಿ ಬೈಕನ್ನು ಮಿಳಘಟ್ಟದಲ್ಲಿರುವ ಮನೆಗೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದರು. ಹೊಸಮನೆಯಲ್ಲಿರುವ ಮನೆಗೆ ಬಂದು ಮಲಗಿದ್ದರು.

ರಾತ್ರಿ ಪ್ರಕಾಶ್ ಅವರಿಗೆ ಫೋನ್ ಬಂದಿದ್ದು, ಮಿಳಘಟ್ಟ ಮನೆ ಬಳಿಗೆ ಹೋಗಿ ನೋಡುವಷ್ಟರಲ್ಲಿ ಬೈಕ್ ಸುಟ್ಟು ಕರಕಲಾಗಿತ್ತು. ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಘಟನೆ ಸಂಭವಿಸಿತ್ತು.

ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಪೊಲೀಸರಿಂದ ಗುಂಡೇಟು ತಿಂದವನು ಸಾಮಾನ್ಯನಲ್ಲ, ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ಖತರ್ನಾಕ್

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment