ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MARCH 2023
SHIMOGA : ಪೆಟ್ರೋಲ್ ಸುರಿದು ದೇವಸ್ಥಾನದ ರಥಕ್ಕೆ (Rathta) ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ರಥಕ್ಕೆ ಹಾನಿಯಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿದೆ. ಮಾ.4ರಂದು ಸಂಜೆ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ – ಕೆಲಸ ಹುಡುಕುತ್ತಿರುವವರೆ ಹುಷಾರ್, ಕೆಲಸ ಕೊಡುವುದಾಗಿ ಶಿವಮೊಗ್ಗದ ಯುವಕನಿಗೆ ಲಕ್ಷ ಲಕ್ಷ ವಂಚನೆ, ಹೇಗಾಯ್ತು?
ಮಾಸ್ಕ್ ಧರಿಸಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ರಥಕ್ಕೆ (Rathta) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ರಥವು ಸಂಪೂರ್ಣವಾಗಿ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



