ಶಿವಮೊಗ್ಗ ಲೈವ್
ಶಿವಮೊಗ್ಗ: ವಂದೇ ಮಾತರಂ ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಿದ್ದಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾರ್ಯಕ್ರಮ ಬಹಿಷ್ಕರಿಸಿ ತೆರಳಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ, ವಿರೋಧ ಚರ್ಚೆಯಾಗುತ್ತಿದೆ.
ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರಂಭದಲ್ಲಿ ವಂದೇ ಮಾತರಂ ಗೀತೆ ಹಾಡಲಾಯಿತು. ವಂದೇ ಮಾತರಂನ ಮೊದಲ ಎರಡು ಚರಣ ಮಾತ್ರ ಹಾಡಲಾಯಿತು. ಆಗ ಶಾಸಕ ಚನ್ನಬಸಪ್ಪ ಸಂಪೂರ್ಣ ಗೀತೆ ಹಾಡಲು ಒತ್ತಾಯಿಸಿದರು.

ಮೊದಲ ಎರಡು ಚರಣ ಮಾತ್ರ ಹಾಡಿಸಲು ಸರ್ಕಾರದಿಂದ ಆದೇಶ ಬಂದಿದೆ ಎಂದು ಅಧಿಕಾರಿಗಳು ಹೇಳಿದರು. ಇದಕ್ಕೆ ಆಕ್ರೋಶಗೊಂಡ ಚನ್ನಬಸಪ್ಪ, ವಂದೇಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಾರ್ಯಕ್ರಮ ಬಹಿಷ್ಕರಿಸಿ ತೆರಳಿದರು. ಇಲ್ಲಿದೆ ವಿಡಿಯೋ