ಗಾಂಧಿ ಪಾರ್ಕ್‌ಗೆ ಶಿವಮೊಗ್ಗ MLA ಭೇಟಿ, ಅರ್ಧಕ್ಕೆ ನಿಂತ ಕಾಮಗಾರಿ ಕಂಡು ಗರಂ, ಅಧಿಕಾರಿಗಳಿಗೆ ಏನೆಲ್ಲ ಸೂಚಿಸಿದರು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್‌.ಕಾಂ | ಶಿವಮೊಗ್ಗ

ಗಾಂಧಿ ಪಾರ್ಕ್‌ನ ಮೂಲ ಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ನಿರ್ದೇಶನ ನೀಡಿದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇಂದು ಗಾಂಧಿ ಪಾರ್ಕ್‌ಗೆ ಭೇಟಿ ನೀಡಿದ ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿವಿಧೆಡೆ ತೆರಳಿ ಪರಿಶೀಲನೆ ನಡೆಸಿದರು. ಫೌಂಟೆನ್ ಕಾಮಗಾರಿ ಪೂರ್ಣಗೊಳಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕ್ರೀಡಾ ಇಲಾಖೆ ಸಹಯೋಗದಲ್ಲಿ ಈಜುಕೊಳವನ್ನು ಸಾರ್ವಜನಿಕರ ಬಳಕೆಗೆ ತರಬೇಕು. ಮಕ್ಕಳ ರೈಲು ಹಾಗೂ ಹಾಳಾಗಿರುವ ಆಟಿಕೆಗಳನ್ನು ದುರಸ್ಥಿಗೊಳಿಸಬೇಕು. ಪಾರ್ಕ್ ಒಳಗಿನ ಕೊಳವನ್ನು ಸ್ವಚ್ಛಗೊಳಿಸಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

MLA-Channabasappa-Visit-Gandhi-Park-in-Shivamogga

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜ್ಞಾನೇಶ್ವರ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಭಾಕರ್, ಇಂಜಿನಿಯರ್‌ಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.