SHIVAMOGGA LIVE NEWS | 1 SEPTEMBER 2023
ಮಹಿಳಾ ಮಿಲನ್, ಆರು ಸಾಧಕಿಯರಿಗೆ ಸನ್ಮಾನ
SHIMOGA : ವೀರಶೈವ ಲಿಂಗಾಯತ ಸಂಘಟನೆಯ ಮಹಿಳಾ ವೇದಿಕೆ ವತಿಯಿಂದ ಮಹಿಳಾ ಮಿಲನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ. ವಿಜಯಾ ದೇವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ನಮಿತಾ ಸರ್ಜಿ, ಸುಧಾ ಜ್ಯೋತಿ ಪ್ರಕಾಶ್ ಮುಖ್ಯ ಅತಿಥಿಯಾಗಿದ್ದರು. ಲಲಿತಾ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಗೌರಮ್ಮ ಷಡಾಕ್ಷರಿ, ರಾಜ್ಯ ಕಾರ್ಯದರ್ಶಿ ಅನುರಾಧ ಉಮೇಶ್ ಹಾಗೂ ಮಧ್ಯ ಕರ್ನಾಟಕ ಪ್ರದೇಶ ಉಪಾಧ್ಯಕ್ಷೆ ಶಾರದಾ ಜಯಣ್ಣ ಉಪಸ್ಥಿತರಿದ್ದರು.
ಸಿಎಂ ಭೇಟಿಯಾದ ಶಿವಮೊಗ್ಗದ ಜನಪ್ರತಿನಿಧಿಗಳ ನಿಯೋಗ
BANGALORE : ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ, ಮಹಾನಗರ ಪಾಲಿಕೆ ಸದಸ್ಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಶಿವಮೊಗ್ಗದ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ದಸರಾ ಉತ್ಸವಕ್ಕೆ ಅನುದಾನ ಮತ್ತು ಜಂಬೂ ಸವಾರಿ ಮೆರವಣಿಗೆಗೆ ಸಕ್ರೆಬೈಲು ಬಿಡಾರದ ಆನೆಗಳನ್ನು ಒದಗಿಸುವಂತೆ ಮನವಿ ಸಲ್ಲಿಸಿದರು. ಸರ್ವ ಪಕ್ಷದ ಪಾಲಿಕೆ ಸದಸ್ಯರು ಈ ವೇಳೆ ಹಾಜರಿದ್ದರು.
ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಸಹಿಸಲು ಅಸಾಧ್ಯ, ಕ್ಷಮೆ ಕೇಳುವಂತೆ ಒತ್ತಾಯ
ವಿಮಾನ ನಿಲ್ದಾಣದ ಟರ್ಮಿನಲ್ ಮುಂದೆ ಪ್ರತಿಭಟನೆ
SHIMOGA : ವಿಮಾನ ನಿಲ್ದಾಣದಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯ ನಾಮಫಲಕಗಳನ್ನು ತೆರವು ಮಾಡುವಂತೆ ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ವಿಮಾನ ನಿಲ್ದಾಣದ ಟರ್ಮಿನಲ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕನ್ನಡ ಹೊರತು ಉಳಿದ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಾಟಾಳ್ ಮಂಜುನಾಥ್, ಪ್ರಶಾಂತ್, ನಿತಿನ್ ರೆಡ್ಡಿ, ರವಿ ಸಾಧುಶೆಟ್ಟಿ, ಸತೀಶ್ ಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಮೊದಲ ವಿಮಾನ, ಒಂದು ಟಿಕೆಟ್ಗೆ 16 ಸಾವಿರ ರೂ., ಪ್ರಯಾಣಿಕರು ಏನಂದ್ರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200