ಶಿವಮೊಗ್ಗ ಸಿಟಿಯ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌, ಯಾವಾಗ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಪಾಲಿಕೆ ಇಂಜಿನಿಯರ್‌ಗಳು ತಮ್ಮ ವ್ಯಾಪ್ತಿಯ ರಸ್ತೆ ಗುಂಡಿಗಳ (Pot Holes) ಬಗ್ಗೆ ವರದಿ ಸಲ್ಲಿಸಬೇಕು. ಶೂನ್ಯ ಗುಂಡಿ ಅಭಿಯಾನದ ಮೂಲಕ ಅವುಗಳನ್ನು ಮುಚ್ಚಬೇಕು ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಡೆಡ್‌ಲೈನ್‌ ಫಿಕ್ಸ್‌ ಮಾಡಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಸ್ತೆ ಗುಂಡಿಗಳನ್ನು ಬಂದ್‌ ಮಾಡುವಂತೆ ಸೂಚಿಸಿದರು.

ಸಂಜೆ ಪರಿಶೀಲನೆ ಕಡ್ಡಾಯ

ವಿದ್ಯುತ್ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡು, ನಗರದಾದ್ಯಂತ ಹಾಳಾಗಿರುವ ಬೀದಿ ದೀಪಗಳನ್ನು ತ್ವರಿತವಾಗಿ ಸರಿಪಡಿಸಬೇಕು. ಪ್ರತಿ ಸಂಜೆ 6 ಗಂಟೆಯ ನಂತರ ವಿದ್ಯುತ್ ಅಧಿಕಾರಿಗಳು ಸ್ವತಃ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವುದು ಕಡ್ಡಾಯ ಎಂದು ತಿಳಿಸಿದರು.

ಶೂನ್ಯ ಗುಂಡಿ ಅಭಿಯಾನ

ನಗರದ ರಸ್ತೆ ಗುಂಡಿಗಳು ಸಾರ್ವಜನಿಕರಿಗೆ ಮಾರಣಾಂತಿಕವಾಗಿ ಪರಿಣಮಿಸಿವ. ಅವುಗಳನ್ನು ಮುಚ್ಚಲು ಆದ್ಯತೆ ನೀಡಬೇಕು. ಡಿಸೆಂಬರ್ ತಿಂಗಳಿನಲ್ಲಿ ‘ಶೂನ್ಯ ಗುಂಡಿ’ ಅಭಿಯಾನದ ಅಡಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು. ಪಾಲಿಕೆ ಇಂಜಿನಿಯರ್‌ಗಳು ವ್ಯಾಪ್ತಿಯ ರಸ್ತೆಗಳ ಗುಂಡಿಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಶಾಸಕ ಚನ್ನಬಸಪ್ಪ ಡೆಡ್‌ಲೈನ್‌ ಫಿಕ್ಸ್‌ ಮಾಡಿದರು.

ಅಗತ್ಯವಿರುವ ಕಡೆಗಳಲ್ಲಿ ರಸ್ತೆ ದುರಸ್ತಿ ಮತ್ತು ವೈಜ್ಞಾನಿಕವಾಗಿ ಹಂಪ್ಸ್‌ಗಳನ್ನು ನಿರ್ಮಿಸಬೇಕು. ನಗರದ ಪ್ರಮುಖ ಜಂಕ್ಷನ್‌ಗಳಲ್ಲಿರುವ ಸಿಗ್ನಲ್ ಪಾಯಿಂಟ್‌ಗಳ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

MLA-Channabasappa-gives-deadline-to-clear-pot-holes.

ನೆಹರು ರಸ್ತೆ ಅಭಿವೃದ್ಧಿ

ನೆಹರು ರಸ್ತೆಯ ಕನ್ಸರ್ವೆನ್ಸಿಗಳನ್ನು ಅಭಿವೃದ್ಧಿಪಡಿಸಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು. ಸಾರ್ವಜನಿಕ ಶೌಚಾಲಯಗಳ ಅಭಿವೃದ್ಧಿಗೆ ಒತ್ತು ನೀಡಬೇಕು.

ನಗರದ ಸೌಂದರ್ಯ, ಸ್ಮಾರಕಗಳ ರಕ್ಷಣೆ

ಮಹಾತ್ಮ ಗಾಂಧಿ ಪಾರ್ಕ್‌ನ ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಕುರಿತು ವರದಿ ಸಲ್ಲಿಸಬೇಕು. ಪಾರ್ಕ್‌ನಲ್ಲಿರುವ ರೈಲು ಕಾರ್ಯಾಚರಣೆಯ ಸಮಸ್ಯೆ ತ್ವರಿತವಾಗಿ ಬಗೆಹರಿಸಬೇಕು. ಇನ್ನು, ಶಿವಪ್ಪ ನಾಯಕ ವೃತ್ತದಲ್ಲಿರುವ ಪ್ರತಿಮೆಯ ಸುತ್ತಲಿನ ಕಬ್ಬಿಣದ ಸರಳುಗಳು ಶಿಥಿಲಗೊಂಡಿವೆ. ಕೂಡಲೇ ದುರಸ್ತಿಗೊಳಿಸಬೇಕು ಎಂದು ಶಾಸಕ ಚನ್ನಬಸಪ್ಪ ಅಧಿಕಾರಿಗಳಿಗೆ ಆದೇಶಿಸದರು.

ಮಹಾನಗರ ಪಾಲಿಕೆ ಕಮಿಷನರ್‌ ಮಯಾಣ್ಣಗೌಡ ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ಇದನ್ನೂ ಓದಿ » ಭದ್ರಾವತಿಯ ವ್ಯಕ್ತಿಗೆ ₹10 ಲಕ್ಷದ ಪರಿಹಾರ ನಿಧಿ ಚೆಕ್‌ ವಿತರಿಸಿದ KSRTC

Pot Holes

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment