SHIVAMOGGA LIVE NEWS | 9 AUGUST 2023
HOLEHONNURU : ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಚಾಲನೆಗೊಳಿಸಿ, ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪರ‍್ಯಾನಾಯ್ಕ (Sharada Puryanaik) ಹೇಳಿದರು.
ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಏನೆಲ್ಲ ಸೂಚನೆ ಕೊಟ್ಟರು?
ಪಾಯಿಂಟ್ 1 : ಅಬ್ಬರಘಟ್ಟ ಗ್ರಾಮದ ಕುಡಿಯುವ ನೀರು ಸರಬರಾಜು ಘಟಕ ಸ್ಥಗಿತವಾಗಿದೆ. ನಗರೋತ್ಥಾನ ಯೋಜನೆ ಅಡಿ ಸಮರ್ಪಕ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಈಗಾಗಲೆ ಯೋಜನೆ ಸಿದ್ಧವಾಗಿದೆ. ಶೀಘ್ರ ಕಾಮಗಾರಿ ಪ್ರಾರಂಭ ಮಾಡಲಾಗುವುದು.
ಪಾಯಿಂಟ್ 2 : 15ನೇ ಹಣಕಾಸು ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಅಧಿಕಾರಿಗಳು ಈ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಆದ್ದರಿಂದ ಮತ್ತೊಮ್ಮೆ ಪರಿಶೀಲಿಸಿ ಒಪ್ಪಿಗೆ ನೀಡಲಾಗುತ್ತದೆ.
ಪಾಯಿಂಟ್ 3 : ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಬೀದಿದೀಪ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿದೆ. ಈ ಬಗ್ಗೆ ತಕ್ಷಣ ಗಮನ ಹರಿಸಬೇಕು.
ಪಾಯಿಂಟ್ 4 : ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ಸ್ವಾಧೀನಾನುಭವ ಪಂಚಾಯಿತಿ ದಾಖಲೆ ಹೊಂದಿರುವವರ ಸ್ವತ್ತುಗಳನ್ನು ಸಕ್ರಮಗೊಳಿಸಿ ಇ-ಆಸ್ತಿ ದಾಖಲೆ ನೀಡಲು ಕ್ರಮ ವಹಿಸಬೇಕು.
ಇದನ್ನೂ ಓದಿ- ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದೆ ಕಿರಿಕ್, ಆಟೋ ಚಾಲಕನ ಮೂಗು, ಕಣ್ಣಿಗೆ ಪಂಚ್, ಕಿತ್ತಾಟಕ್ಕೆ ಕಾರಣವೇನು?
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾಯಿ ಚೌಟ, ಕುಡಿಯುವ ನೀರು ಸರಬರಾಜು ಯೋಜನೆ ಎಂಜಿನಿಯರ್ ಗಣೇಶ್‌ನಾಯ್ಕ, ಸ್ಥಳೀಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಎಂ.ದೇವಾನಂದ್, ಸಿಡಿಪಿಒ ಸಿ.ಸುರೇಶ್, ಎಎಸ್‌ಐ ಎನ್.ಕಷ್ಣನಾಯ್ಕ, ರಾಜಸ್ವ ನಿರೀಕ್ಷಕ ಬಿ.ಎಂ.ಮಾನೋಜಿರಾವ್, ಉಪತಹಸೀಲ್ದಾರ್ ಬಸವರಾಜ್, ಟಿ.ನಾಗರಾಜ್, ಮೆಸ್ಕಾಂ ಸಹಾಯಕ ಎಂಜಿನಿಯರ್ ಎಚ್.ಭುವನೇಶ್ ಕುಮಾರ್ ವಸಂತಕುಮಾರ್, ಶಾಸಕರ ಆಪ್ತ ಸಹಾಯಕ ಲಕ್ಷ್ಮೀಶ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200