ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 29 MAY 2023
SHIMOGA : ನಗರದ ವಿವಿಧೆಡೆ ಜೋರು ಗಾಳಿ, ಮಳೆಗೆ ಮರಗಳು ಬುಡಮೇಲಾಗಿವೆ. ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿವಿಧೆಡೆ ತೆರಳಿ ತೆರವು ಕಾರ್ಯಾಚರಣೆ (City Rounds) ಪರಿಶೀಲಿಸಿದರು. ಅಧಿಕಾರಿಗಳಿಗೆ ಕರೆ ಮಾಡಿ, ತುರ್ತು ನೆರವು ನೀಡುವಂತೆ ಸೂಚಿಸಿದರು.
ಸೋಮವಾರ ಸಂಜೆ ಗಾಳಿ, ಮಳೆಯಾಗಿದೆ. ಇದರಿಂದಾಗಿ ನಗರದ ವಿವಿಧೆಡೆ ಮರಗಳು ಧರೆಗುರುಳಿದೆ. ವಾಹನಗಳಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬಿಗಳು ತುಂಡಾಗಿವೆ. ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ಪರಿಶೀಲನೆ ನಡೆಸಿದರು. ಅಲ್ಲದೆ ತುರ್ತಾಗಿ ಮರಗಳ ತೆರವು ಮಾಡಿ, ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ – ಗಾಳಿ, ಮಳೆಗೆ ಹಾನಿಯಾಯ್ತು ಮನೆಯ ಶೀಟ್, ಹಾರಿ ಬಂದು ಹೈವೆ ರಸ್ತೆಯ ಸಿಸಿ ಕ್ಯಾಮರಾ ಕಂಬದಲ್ಲಿ ಜೋತಾಡ್ತಿದೆ ಫ್ಲೆಕ್ಸ್
ಇನ್ನು, ಬೊಮ್ಮನಕಟ್ಟೆಯಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆ ಸಾವು
ಮಹಾನಗರ ಪಾಲಿಕೆ, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಈ ವೇಳೆ ಹಾಜರಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422