ಶಿವಮೊಗ್ಗ: IPLಟಿಕೆಟ್ ನಿರಾಕರಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿಧಾನಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಕಳೆದ ವರ್ಷ IPL ಪಂದ್ಯದ ವೇಳೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ಜನರ ದೃಷ್ಟಿಯಲ್ಲಿ ನಮ್ಮನ್ನು ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಐಪಿಎಲ್ ಪಂದ್ಯದ ಯಾವುದೇ ಪಾಸ್ ಅಥವಾ ಟಿಕೆಟ್‌ಗಳನ್ನು ನಾನು ನಿರಾಕರಿಸುತ್ತೇನೆ. ಮುಂಬರುವ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ಗಳನ್ನು ವಿತರಿಸಬಾರದು ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
