ಸಭೆಗಳು ನಡೆಯುವುದು ಕಾಫಿ, ಟೀ ಕುಡಿಯಲು ಅಲ್ಲ, ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿಗೆ ಜನ ಕಳುಹಿಸುವೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 29 JUNE 2023

SHIMOGA : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಲ್ಲೆಲ್ಲ ಜಲಜೀವನ ಮಿಷನ್‌ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅಧಿಕಾರಿಗಳಿಗೆ ಸೂಚಿಸಿದರು.

Shimoga-Rural-MLA-held-KDP-Meeting-at-Taluk-Panchayath

ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕಿ, ಕುಡಿಯುವ ನೀರಿಗಾಗಿ (Drinking Water) ಟಾಸ್ಕ್‌ ಫೋರ್ಸ್‌ ಬಿಡುಗಡೆ ಮಾಡುವ ಅನುದಾನಕ್ಕೆ ಕಾಯುವುದು ಬೇಡ. ಜಲ ಜೀವನ ಮಿಷನ್‌ ಯೋಜನೆಯ ಅನುದಾನವನ್ನು ಹಿಂದಕ್ಕೆ ಕಳುಹಿಸದೆ ಮತ್ತು 15ನೇ ಹಣಕಾಸು ಯೋಜನೆ ಅನುದಾನವನ್ನು ಬಳಸಿಕೊಂಡು ಕೊಳವೆ ಬಾವಿಗಳನ್ನು ಕೊರೆಯಿಸಿ ಎಂದು ಸೂಚನೆ ನೀಡಿದರು.

ಸೇವಾಲಾಲ್‌ ನಗರ, ಶಿವಣ್ಣನ ಕ್ಯಾಂಪ್ ಸೇರಿದಂತೆ ಹಲವು ಕಡೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ ಎಂದು ದೂರುಗಳು ಬರುತ್ತಿವೆ. ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆ ಆಗದ ಹಾಗೆ ನೋಡಿಕೊಳ್ಳಬೇಕು. ನೀರಿನ ಸಮಸ್ಯೆ ಉಂಟಾದರೆ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಗ್ರಾಮೀಣ ಕುಡಿಯು ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಚೇರಿ ಎದುರು ಜನರನ್ನು ಕೂರಿಸಲಾಗುತ್ತದೆ.ಶಾರದಾ ಪೂರ್ಯಾನಾಯ್ಕ, ಶಾಸಕಿ

Shimoga-Rural-MLA-held-KDP-Meeting-at-Taluk-Panchayath

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಎಇಇ ಭರ್ಮಪ್ಪ ಮಾತನಾಡಿ, ಕ್ಷೇತ್ರದ ಹಲವು ಕಡೆ ಈಗಾಗಲೇ ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಇನ್ನೂ 78 ಕಡೆ ಕೊಳವೆ ಬಾವಿಗಾಗಿ ಅರ್ಜಿ ಬಂದಿದೆ. ಅವುಗಳನ್ನ ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ. ನೀರಿನ ಕೊರತೆ ಆಗದ ಹಾಗೆ ನೋಡಿಕೊಳ್ಳುತ್ತೇವೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲೆಗೆ 1 ಕೋಟಿ ರು. ಬಿಡುಗಡೆಯಾಗಿದೆ. ಈ ಪೈಕಿ ಕ್ಷೇತ್ರಕ್ಕೆ 14 ಲಕ್ಷ ರೂ. ಲಭ್ಯವಾಗಲಿದೆ ಎಂದರು.

ಗರಂ ಆದ ಎಂಎಲ್‌ಎ

ಕ್ಷೇತ್ರಕ್ಕೆ 14 ಲಕ್ಷ ರೂ. ಬಿಡುಗಡೆಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಗರಂ ಆದರು. 14 ಲಕ್ಷ ರೂ. ಹಣ ಈಗ ಕೊರೆಸಿರುವ ಬೋರ್‌ವೆಲ್‌ಗಳಿಗೆ ಕೊಡಲು ಆಗುವುದಿಲ್ಲ. ಬಾಕಿ ಇರುವುದಕ್ಕೆ ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅಲ್ಲದೆ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒಗಳ ಸಭೆ ಕರೆದು ನೀರಿನ ಸಮಸ್ಯೆ ಕುರಿತು ಚರ್ಚೆ ನಡೆಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಾಡಿಕೆಗಿಂತಲು ಕಡಿಮೆ ಮಳೆ

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಮಾತನಾಡಿ, ತಾಲೂಕಿನಲ್ಲಿ ವಾಡಿಕೆಗಿಂತಲೂ ಶೇ.74ರಷ್ಟು ಮಳೆ ಕೊರತೆಯಾಗಿದೆ. ಮಳೆ ಬಂದರೆ ಕೃಷಿ ಚುಟವಟಿಕೆ ಬಿರುಸಲಾಗಿದೆ. ಈ ಹಿನ್ನೆಲೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಲಾಗಿದೆ ಎಂದರು.‌

Shimoga-Rural-MLA-held-KDP-Meeting-at-Taluk-Panchayath

ಕಾಫಿ, ಟೀ ಕುಡಿಯಲು ಸಭೆ ನಡೆಸುತ್ತಿಲ್ಲ

ಆದರ್ಶ ಗ್ರಾಮ, ನಿವೇಶನ ಹಂಚಿಕೆ ಸೇರಿದಂತೆ ಕೆಲವು ಇಲಾಖೆ ಅಧಿಕಾರಿಗಳು ಅಪೂರ್ಣ ಮಾಹಿತಿ ನೀಡಿದರು. ಇದರಿಂದ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸಿಟ್ಟಾದರು. ಸಾಮಾನ್ಯ ಸಭೆ, ಕೆಡಿಪಿ ಸಭೆಗಳು ಕಾಫಿ, ಟೀ ಕುಡಿದು, ಬಿಸ್ಕೇಟ್‌ ತಿಂದು ಹೋಗುವುದಕ್ಕಲ್ಲ. ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಬರಬೇಕು ಎಂದು ತರಾಟೆಗೆ ತೆಗೆದಕೊಂಡರು.

ಇದನ್ನೂ ಓದಿ – ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಮಾಜಿ ಸಚಿವರಿಂದ ಉಪವಾಸ ಸತ್ಯಾಗ್ರಹ, ಕಾರಣವೇನು? ಯಾವಾಗ?

ವಿವಿಧ ಇಲಾಖೆ ಅಧಿಕಾರಿಗಳು ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಇಲಾಖೆಯ ಕಾರ್ಯಕ್ರಮಗಳು, ಯೋಜನೆ ಮತ್ತು ಅವುಗಳ ಪ್ರಗತಿ ಕುರಿತು ಮಾಹಿತಿ ನೀಡಿದರು. ಶಿವಮೊಗ್ಗ ತಾಲೂಕು ಪಂಚಾಯಿತಿ ಇ.ಒ ಅವಿನಾಶ್‌, ಆಡಳಿತಾಧಿಕಾರಿ ನಂದಿನಿ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment