ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಡಿಸೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.
ಮತ ಎಣಿಕೆ ಕಾರ್ಯಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಏನೆಲ್ಲ ವ್ಯವಸ್ಥೆ ಮಾಡಲಾಗಿದೆ?
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಸ್ಟ್ರಾಂಗ್ ರೂಂನಲ್ಲಿರುವ ಮತಪೆಟ್ಟಿಗೆಗಳನ್ನು ತೆಗೆದು, ಎಣಿಕೆ ಕಾರ್ಯ ನಡೆಸಲಾಗುತ್ತದೆ.
ಕೌಂಟಿಂಗ್ ಏಜೆಂಟ್’ಗಳನ್ನು ನೇಮಿಸಿಕೊಳ್ಳುವಂತೆ ಈಗಾಗಲೇ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಏಜೆಂಟ್’ಗಳ ಹೊರತು ಮತ್ತಿನ್ಯಾರನ್ನೂ ಮತ ಎಣಿಕೆ ಕೇಂದ್ರದ ಒಳಗೆ ಬಿಡುವುದಿಲ್ಲ.
ಮತ ಎಣಿಕೆಗೆ 98 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಸಂಬಂಧ ಅಧಿಕಾರಿಗಳಿಗೆ ಈಗಾಗಲೆ ತರಬೇತಿ ನೀಡಲಾಗಿದೆ. ಪ್ರಶಾಸ್ತ್ಯ ಮತಗಳ ಎಣಿಕೆ ಸಂಬಂಧ ತಿಳಿವಳಿಕೆ ನೀಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಸುತ್ತಲು 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಲಾಗಿದೆ.
ಇನ್ನು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆ ಮದ್ಯ ಮಾರಾಟವನ್ನು ನಿಷೇಧ ಮಾಡಿ, ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.