ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021
ಶಿವಮೊಗ್ಗದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಆವರಣದ ಸುತ್ತಲು ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸ್ಟ್ರಾಂಗ್ ರೂಂ ಬಾಗಿಲು ಓಪನ್
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು, ಪಕ್ಷದ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಬಾಗಿಲು ತೆಗೆಯಲಾಯಿತು. ಮತ ಎಣಿಕೆ ಕೇಂದ್ರದಲ್ಲಿ ಯಾವುದೆ ಗೊಂದಲವಾಗಬಾರದು ಎಂಬ ಕಾರಣಕ್ಕೆ ಬ್ಯಾರಿಕೇಡ್’ಗಳನ್ನು ಹಾಕಲಾಗಿದೆ.
ಪಾಸ್ ಇದ್ದರಷ್ಟೆ ಒಳ ಪ್ರವೇಶ
ಮತ ಎಣಿಕೆ ಕಾರ್ಯದಲ್ಲಿ ಸುಮಾರು ನೂರು ಸಿಬ್ಬಂದಿ ಪಾಲ್ಗೊಂಡಿದ್ದಾರೆ. ಯಾವುದೆ ಗೊಂದಲವಾಗದಂತೆ ತಡೆಯಲು ಸಿಬ್ಬಂದಿಗೆ ಪಾಸ್ ನೀಡಲಾಗಿದೆ. ಅಭ್ಯರ್ಥಿಗಳು, ಅವರ ಏಜೆಂಟರಿಗೆ ಪ್ರತ್ಯೇಕ ಪಾಸ್ ನೀಡಲಾಗಿದೆ. ಪಾಸ್ ಹೊಂದಿರುವವರಿಗೆ ಮಾತ್ರ ಮತಗಟ್ಟೆಯೊಳಗೆ ಬಿಡಲಾಗುತ್ತಿದೆ. ಸಹ್ಯಾದ್ರಿ ಕಾಲೇಜು ಗೇಟು ಮುಂದೆ ಪೊಲೀಸರನ್ನು ನಿಯೋಜಿಸಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಒಳ ಬಿಡುತ್ತಿದ್ದಾರೆ.
ಕಾಲೇಜು ಸುತ್ತಲು ನಿಷೇಧಾಜ್ಞೆ ಜಾರಿ
ಮತ ಎಣಿಕೆ ಕಾರ್ಯದ ಹಿನ್ನೆಲೆ ಸಹ್ಯಾದ್ರಿ ಕಾಲೇಜು ಸುತ್ತಮುತ್ತಲು ಡಿ.15ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಅವಧಿಯಲ್ಲಿ ಕಾಲೇಜು ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಐದಕ್ಕಿಂತಲೂ ಹೆಚ್ಚು ಮಂದಿ ಗುಂಪು ಸೇರುವುದು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಘೋಷಣೆ ಕೂಗುವುದು, ಸಂಭ್ರಮಾಚರಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200