ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು (Action) ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿ.ಎಸ್.ಅರುಣ್, ಚಿತ್ತಾಪುರದಲ್ಲಿ ಸ್ವಲ್ಪ ಹೆಚ್ವು ಕಡಿಮೆ ಆಗಿದ್ದರೆ ಛಲವಾದಿ ನಾರಾಯಣಸ್ವಾಮಿ ಅವರ ಜೀವಕ್ಕೆ ಕುತ್ತು ಬರುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು.

ಡಿ.ಎಸ್.ಅರುಣ್ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್
ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರ ಗುಂಡಾ ವರ್ತನೆ ಕಾರ್ಯಕರ್ತರಿಗು ಬಂದಿದೆ.
18 ಶಾಸಕರ ಅಮಾನತು ಮಾಡಿ ಸವಲತ್ತು ಕಸಿದುಕೊಂಡಿದ್ದಾರೆ. ಸಿ.ಟಿ.ರವಿ ಅವರ ಪ್ರಕರಣದಲ್ಲಿಯು ವಿನಾಕಾರಣ ಗುರಿ ಮಾಡಲಾಯಿತು.
ಛಲವಾದಿ ನಾರಾಯಣಸ್ವಾಮಿ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕರ ಹಗರಣಗಳನ್ನು ಬಿಡಿಬಿಡಿಯಾಗಿ ಬಿಚ್ಚಿಡುತ್ತಿದ್ದಾರೆ. ಕಾಂಗ್ರೆಸಿಗರು ಅವರ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಆರೋಪ ಪಟ್ಟಿ ಅಭಿಯಾನ, 8 ಪುಟದ ಚಾರ್ಜ್ ಶೀಟ್ ಬಿಡುಗಡೆ ಮಾಡಿದ MLA, ಏನಿದು?

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















