SHIVAMOGGA LIVE NEWS | 15 NOVEMBER 2023
ರೈಲಿನಲ್ಲಿ ಸಿಕ್ಕ ಮೊಬೈಲ್ ವಾರಸುದಾರನ ಕೈಗೆ
SHIMOGA : ರೈಲಿನಲ್ಲಿ ಸಿಕ್ಕ ಸ್ಮಾರ್ಟ್ ಫೋನ್ ಅನ್ನು ವಾರಸುದಾರರಿಗೆ ಹಿಂತಿರುಗಿಸಲಾಗಿದೆ. ಮೈಸೂರು ತಾಳಗುಪ್ಪ ರೈಲಿನಲ್ಲಿ ರೆಡ್‌ಮೀ ಮೊಬೈಲ್ ಪತ್ತೆಯಾಗಿತ್ತು. ರೈಲ್ವೆ ಪೊಲೀಸರು ವಾರಸುದಾರನನ್ನು ಪತ್ತೆ ಹಚ್ಚಿ ಮೊಬೈಲ್ ಹಿಂತಿರುಗಿಸಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆರ್‌ಪಿಎಫ್ ಪೊಲೀಸರು ಮೊಬೈಲ್ ಹಿಂತಿರುಗಿಸಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತೆ ರಕ್ಷಣೆ
SHIMOGA : ರೈಲ್ವೆ ನಿಲ್ದಾಣದಲ್ಲಿ 15 ವರ್ಷದ ಬಾಲಕಿಯನ್ನು ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ನಿಲ್ದಾಣದಲ್ಲಿ ಅಪ್ರಾಪ್ತೆ ಓಡಾಡುತ್ತಿರುವುದನ್ನು ಗಮನಿಸಿದ ರೈಲ್ವೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಪರೇಷನ್ ನನ್ನೆಫರಿಸ್ತೆ ಯೋಜನೆ ಅಡಿ ಅಪ್ರಾಪ್ತೆಯನ್ನು ರಕ್ಷಿಸಿ ಸುರಭಿ ಉಜ್ವಲ ಕೇಂದ್ರಕ್ಕೆ ಆಕೆಯನ್ನು ಕರೆದೊಯ್ದು ದಾಖಲಿಸಲಾಗಿದೆ.
ಇದನ್ನೂ ಓದಿ – ಆಯನೂರಿನ ಇಬ್ಬರು ಶಿವಮೊಗ್ಗದಲ್ಲಿ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್, ಕಾರಣವೇನು?
ಖಾಲಿ ಹುದ್ದೆಗೆ ನೇರ ಸಂದರ್ಶನ
SHIMOGA : ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನ.20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಸೂಕ್ತ ದಾಖಲೆ ಜೊತೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಐ.ಡಿ.ಎಸ್.ಪಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200