ಶಿವಮೊಗ್ಗದಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ರಸ್ತೆಯಲ್ಲಿ ನಡೆದು ಹೋಗುವಾಗ ಹುಷಾರ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 MAY 2023

SHIMOGA : ಮೊಬೈಲ್‌ ಫೋನ್‌ನಲ್ಲಿ (Mobile Phone) ಮಾತನಾಡುತ್ತ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕಳ್ಳರು ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್‌, ಚಾಕುವಿನಿಂದ ಹಲ್ಲೆ

ಸಂದೀಪ್‌ ಎಂಬುವವರ ರಿಯಲ್‌ ಮೀ 9 ಪ್ರೋ ಮೊಬೈಲ್‌ (Mobile Phone) ಕಳ್ಳತನವಾಗಿದೆ. ಕೆಲಸ ಮುಗಿಸಿಕೊಂಡು ಸ್ವಾಮಿ ವಿವೇಕಾನಂದ ಬಡಾವಣೆಯ ಸಿ ಬ್ಲಾಕ್‌ನಲ್ಲಿರುವ ಮನೆ ಕಡೆಗೆ ನಡೆದು ಹೋಗುತ್ತಿದ್ದರು. ಈ ವೇಳೆ ಸಂದೀಪ್‌ ಸಹೋದರನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದರು. ಆಗ ಬೈಕಿನಲ್ಲಿ ಬಂದ ಮೂವರು ಸಂದೀಪ್‌ ಅವರ ಮೊಬೈಲ್ ಕಸಿದುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment