ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 1 JUNE 2023
SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲನ್ನು (Mobile Phone) ಕಳ್ಳರು ಕಸಿದುಕೊಂಡು ಪರಾರಿಯಾದ ಮತ್ತೊಂದು ಪ್ರಕರಣ ವರದಿಯಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ನಿವೃತ್ತ ಉದ್ಯೋಗಿ ಮಹಾಲಿಂಗ ಗೌಡ ಅವರು ಕೆಎಸ್ಆರ್ಟಿಸಿ ಬಸ್ ಡಿಪೋ ಎದುರು ಫೋನಿನಲ್ಲಿ ಮಾತನಾಡಿಕೊಂಡು ನಡೆದು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಮೂವರು ಯುವಕರು ಮೊಬೈಲ್ (Mobile Phone) ಕಸಿದುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತ ರಸ್ತೆಯಲ್ಲಿ ನಡೆದು ಹೋಗುವಾಗ ಹುಷಾರ್
ಸ್ಯಾಮ್ಸಂಗ್ ಎ21 ಮೊಬೈಲ್ ಕಳ್ಳತನವಾಗಿದೆ. ಕಳ್ಳರು 18 ರಿಂದ 20 ವರ್ಷದವರಾಗಿದ್ದಾರೆ ಎಂದು ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





