ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019
ಮೊಬೈಲ್ ಟವರ್ ನಿರ್ಮಾಣಕ್ಕೆ ಇಡಿ ಏರಿಯಾದ ಜನರೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ, ಮತ್ತೆ ಇಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದಾರೆ.
ಶಿವಮೊಗ್ಗದ RML ನಗರದ ಮನೆ ಒಂದರ ಮೇಲೆ ಟವರ್ ನಿರ್ಮಿಸಲಾಗುತ್ತಿದೆ. ಇದರಿಂದ ಸುತ್ತಮುತ್ತಲ ಜನರಿಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
RML ನಗರ ಜನನಿಬಿಡ ಪ್ರದೇಶವಾಗಿದೆ. ಸುತ್ತಮುತ್ತಲು ಸ್ಕೂಲು, ಕಾಲೇಜುಗಳಿವೆ. ಟವರ್ ನಿರ್ಮಾಣವಾದರೆ ರೇಡಿಯೇಷನ್ ಉಂಟಾಗಲಿದೆ. ಇದು ಮಕ್ಕಳ ಮೇಲೆ ದುಷ್ಪರಿಣಾಮ ಉಂಟು ಮಾಡಲಿದೆ. ಹಾಗಾಗಿ ಟವರ್ ನಿರ್ಮಾಣ ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸುಧೀರ್ ಕುಮಾರ್, ಶ್ರೀಧರಮೂರ್ತಿ, ಸುರೇಂದ್ರ, ಅಬ್ದುಲ್, ಆರೀಫ್, ರೇಣುಕಾ, ಕಲಾವತಿ, ಕವಿತಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Locals Protest against establishing a mobile tower in RML Nagar. People protested in front of Shimoga Deputy Commissioner’s office.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





