ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಅಕ್ಟೋಬರ್ 2019
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಬಳಿ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲೆ ಪಕೋಡ ಮಾಡಿ ಸಾರ್ವಜನಿಕರಿಗೆ ಹಂಚಿ, ನಿರುದ್ಯೋಗ ಸಮಸ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದಾಗಿ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ, ಸರ್ಕಾರದ ಸಂಸ್ಥೆಗಳಿಗೆ ಬೀಗ ಹಾಕಲಾಗುತ್ತಿದೆ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡದಿರುವುದು, ಏಳು ಕೋಟಿ ಉದ್ಯೋಗ ನಷ್ಟ ಸೇರಿದಂತೆ ದೇಶಾದ್ಯಂತ ಸಮಸ್ಯೆ ಹುಟ್ಟಿಕೊಂಡಿವೆ. ಕೂಡಲೆ ಕೇಂದ್ರ ಸರ್ಕಾರ ಜನರ ಸಮಸ್ಯೆ ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹಿಳೆಯರು ಮತ್ತು ಯುವಕರು ಪ್ರತ್ಯೇಕವಾಗಿ ಪಕೋಡ ತಯಾರಿಸಿದರು. ಶಿವಪ್ಪನಾಯಕ ಪ್ರತಿಮೆ ಬಳಿ ಬರುವ ಸಾರ್ವಜನಿಕರಿಗೆ ಪಕೋಡ ಹಂಚಲಾಯಿತು. ಆ ಬಳಿಕ ಧರಣಿ ನಡೆಸಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಲಾಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಪ್ರಮುಖರಾದ ತೀ.ನಾ.ಶ್ರೀನಿವಾಸ್ ವಿಶ್ವನಾಥ ಕಾಶಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]