ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 MAY 2024
ELECTION NEWS : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವುದಕ್ಕೆ ತಡೆಯೊಡ್ಡುವ ಬಿಜೆಪಿಯ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಸಿಜೆಎಂ ನ್ಯಾಯಾಲಯದಲ್ಲಿ ಭಾವಚಿತ್ರ ಬಳಕೆ ಸಂಬಂಧ ಪ್ರಕರಣದ ಮುಂದಿನ ವಿಚಾರಣೆಯು ಮೇ 27ಕ್ಕೆ ಹೋಗಿದೆ. ಇನ್ನು ಐದು ದಿನದಲ್ಲಿ ಚುನಾವಣೆಯ ಮುಗಿದು ಹೋಗುವುದರಿಂದ ಮೋದಿ ಭಾವಚಿತ್ರ ಬಳಕೆಗೆ ಈಶ್ವರಪ್ಪಗೆ ಯಾವುದೇ ಅಡೆತಡೆ ಇಲ್ಲದಂತಾಗಿದೆ.
ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆ ಮಾಡದಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ದಾವೆ ಹೂಡಿದ್ದಾರೆ. ಅದಕ್ಕೆ ಈಶ್ವರಪ್ಪ ಅವರು ಆಕ್ಷೇಪಣೆ ಸಲ್ಲಿಸಿರುವುದಲ್ಲದೆ ದಾವೆಯನ್ನು ವಜಾಗೊಳಿಸುವಂತೆ ಸಹ ಅರ್ಜಿ ಸಲ್ಲಿಸಿದ್ದಾರೆ.
‘ಮೋದಿ ಭಾವಚಿತ್ರ ಬಳಕೆಗೆ ತಡೆಯೊಡ್ಡಬೇಕೆಂಬ ಬಿಜೆಪಿ ಅಪೇಕ್ಷೆಗೆ ನ್ಯಾಯಾಲಯದಲ್ಲಿ ಮನ್ನಣೆ ಸಿಕ್ಕಿಲ್ಲ. ಮೋದಿಯಿಂದ ನನ್ನನ್ನು ಬೇರಾಗಿಸಲು ಚುನಾವಣೆ ಅಲ್ಲದೆ ಆನಂತರವೂ ಸಾಧ್ಯವಿಲ್ಲ. ಇದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು,’ ಎಂದು ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ – ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?
LATEST NEWS
- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

- ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

- ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

About The Editor
ನಿತಿನ್ ಆರ್.ಕೈದೊಟ್ಲು
















