ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021
ಶಾಸಕರೊಬ್ಬರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಯಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜುಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್ ಬುಕ್’ನಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜು ಕಳುಹಿಸಲಾಗುತ್ತಿದೆ.
ಏನೆಂದು ಮೆಸೇಜ್ ಮಾಡಲಾಗುತ್ತಿದೆ?
ಫೇಸ್ ಬುಕ್ ಸ್ನೇಹಿತರಿಗೆ ಮೆಸೇಜ್ ಮಾಡಿರುವ ಹ್ಯಾಕರ್’ಗಳು, ತಾವು ಸಮಸ್ಯೆಯಲ್ಲಿದ್ದು, ತುರ್ತಾಗಿ ಹಣ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಹಣ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ. 15 ಸಾವಿರ ರೂ. ತುರ್ತಾಗಿ ಬೇಕಿದೆ ಎಂದು ಹೇಳುತ್ತಿದ್ದಾರೆ.
ಮೋಸ ಹೋಗಬೇಡಿ
ಇನ್ನು, ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಆಯನೂರು ಮಂಜುನಾಥ್ ಅವರ ಆಪ್ತ ಕಾರ್ಯದರ್ಶಿ ಅವರು ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ‘ಶ್ರೀಯುತ ಆಯನೂರು ಮಂಜುನಾಥ್ ರವರ ಫೇಸ್‌ಬುಕ್ ಅಕೌಂಟ್ ಹ್ಯಾಕ್ ಮಾಡಿರುತ್ತಾರೆ. ಹಾಗಾಗಿ ಯಾವುದೇ ರೀತಿಯಲ್ಲಿ ಈ ಫೇಸ್‌ಬುಕ್ ಮೆಸೇಜ್ ಗೆ ಯಾರೂ ಸ್ಪಂದಿಸಬಾರದಾಗಿ ಕೋರಿದೆ’ ಎಂದು ಸಂದೇಶ ರವಾನಿಸಿದ್ದಾರೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















