ಶಿವಮೊಗ್ಗದಲ್ಲಿ ನೈತಿಕ ಪೊಲೀಸ್‌ಗಿರಿ, ಬಸ್ ನಿಲ್ದಾಣದಲ್ಲಿ ಯುವಕ, ಯುವತಿಯನ್ನು ಅಡ್ಡಗಟ್ಟಿದ ಗುಂಪು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 ಮಾರ್ಚ್ 2022

ಶಿವಮೊಗ್ಗದಲ್ಲಿ ನೈತಿಕ ಪೊಲೀಸ್’ಗಿರಿಯ ಮತ್ತೊಂದು ಪ್ರಕರಣ ವರದಿಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗದಿಂದ ಬಸ್ಸಿನಲ್ಲಿ ಬಂದಿದ್ದ  ಯುವಕ, ಯುವತಿ ಮೇಲೆ ನೈತಿಕ ಪೊಲೀಸ್’ಗಿರಿ ನಡೆದಿದೆ.

ಏನಿದು ಪ್ರಕರಣ?

ಚಿತ್ರದುರ್ಗದಿಂದ ತೀರ್ಥಹಳ್ಳಿಯ ಕುಪ್ಪಳಿಗೆ ತೆರಳಲು ಯುವಕ ಮತ್ತು ಯುವತಿ ಬಂದಿದ್ದಾರೆ. ಬಸ್ಸಿಗಾಗಿ ವಿಚಾರಿಸುತ್ತಿದ್ದಾಗ ಯುವಕರ ಗುಂಪೊಂದು ಇವರನ್ನು ಅಡ್ಡಗಟ್ಟಿದ್ದಾರೆ. ಗುಂಪಿನಲ್ಲಿ ಆರೇಳು ಯುವಕರಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವಕ, ಯುವತಿಯನ್ನು ಪ್ರಶ್ನೆ ಮಾಡಿರುವ ಗುಂಪು, ಯಾರು ನೀವು? ಇಲ್ಲಿಗೇಕೆ ಬಂದಿದ್ದೀರ? ಮುಸ್ಲಿಂ ಹುಡುಗಿಯನ್ನು ಯಾಕೆ ಕರೆದುಕೊಂಡು ಬಂದಿದ್ದೀಯ? ಎಂದು ಯುವಕರು ಪ್ರಶ್ನಿಸಿದ್ದಾರೆ. ಅಲ್ಲದೆ ಯುವಕನ್ನು ತಳ್ಳಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಜನರು ಗುಂಪುಗೂಡುತ್ತಿದ್ದಂತೆ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.  

ಬಿ.ಎಡ್ ಕೋರ್ಸ್’ನ ಡಾಕ್ಯೂಮೆಂಟರಿ ಮಾಡುವ ಉದ್ದೇಶದಿಂದ ತಾವು ಕುಪ್ಪಳಿಗೆ ತೆರಳುತ್ತಿರುವುದಾಗಿ ಯುವಕ, ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ತಮ್ಮನ್ನು ಬೈದು, ತಳ್ಳಾಡಿದ ಯುವಕರ ಗುಂಪಿನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment