MORNING NEWS: ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಅಪ್‌ಡೇಟ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

MORNING NEWS:  ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಅಪ್‌ಡೇಟ್‌

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೆಪಿಎಸ್‌ ಶಾಲೆ 500 ರಿಂದ 800ಕ್ಕೆ ಏರಿಕೆ

ಸಚಿವರ ಕಚೇರಿ: ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿರುವ ಕರ್ನಾಟಕ ಪಬ್ಲಿಕ್‌ ಶಾಲೆಗಳ ಸಂಖ್ಯೆಯನ್ನು 500 ರಿಂದ 800ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Morning News - Shimoga city

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಸಚಿವರ ಕಚೇರಿ: ನೆಹರು ರಸ್ತೆಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದಲ್ಲಿ ಸಚಿವ ಮಧು ಬಂಗಾರಪ್ಪ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ವಿವಿಧ ಸಮಸ್ಯೆಗಳು, ಕೆಲಸ ಕಾರ್ಯಗಳ ಕುರಿತು ಸಚಿವರಿಗೆ ಅಹವಾಲು ಸಲ್ಲಿಸಿದರು.

Morning News - Shimoga city

ದಸರಾ ಕ್ರೀಡಾಕೂಟಕ್ಕೆ ಚಾಲನೆ

ನೆಹರು ಕ್ರೀಡಾಂಗಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ಎರಡು ದಿನದ ದಸರಾ ಕ್ರೀಡಾಕೂಟಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.

ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರದ ಸಾಧಕರಿಗೆ ನಮ್ಮಲ್ಲಿ ವಿಶೇಷ ಗೌರವವಿದೆ. ಸಾಧಕರು ನಮ್ಮೆಲ್ಲರಿಗು ಸ್ಪೂರ್ತಿಯಾಗಿರುತ್ತಾರೆ.

– ಮಧು ಬಂಗಾರಪ್ಪ, ಸಚಿವ

ಇದನ್ನೂ ಓದಿ » ಸಿಟಿ ಸೆಂಟರ್‌ ಪಕ್ಕದ ಅಂಡರ್‌ ಪಾಸ್‌ಗೆ ಎಂಎಲ್‌ಎ ಭೇಟಿ, ತ್ವರಿತ ಕ್ರಮಕ್ಕೆ ಸೂಚನೆ

ಧರ್ಮಸ್ಥಳಕ್ಕೆ ಧರ್ಮರಕ್ಷಣಾ ಜಾಥಾ

ಗುಂಡಪ್ಪ ಶೆಡ್‌: ರಾಷ್ಟ್ರಭಕ್ತರ ಬಳಗದ ವತಿಯಿಂದ ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ ನಡೆಸಲಾಯಿತು. ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಜಾಥಾಗೆ ಚಾಲನೆ ನೀಡಿದರು. ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು, ಈಶ್ವರಪ್ಪ ಅವರ ಅಭಿಮಾನಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಧರ್ಮದ್ರೋಹಿಗಳು ಧರ್ಮಸ್ಥಳದ ಬಗ್ಗೆ ಅಪಮಾನ ಮಾಡಿದ್ದಾರೆ. ಇದನ್ನು ಖಂಡಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಜೊತೆಗೆ ನಾವೆಲ್ಲ ಇದ್ದೇವೆ ಎಂಬುದನ್ನು ತಿಳಿಸಲು ಈ ಜಾಥಾ ನಡೆಸಲಾಗುತ್ತಿದೆ.

– ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ

Morning News - Shimoga city

ಗೋಪಿ ವೃತ್ತದಲ್ಲಿ ಮಾನವ ಸರಪಳಿ

ಪತ್ರಿಕಾ ಭವನ: ನಗರದ ಶಾಂತಿಗಾಗಿ ನಡಿಗೆ ತಂಡದಿಂದ ಸೆ.4ರಂದು ಸಂಜೆ 4.30ಕ್ಕೆ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ಸಂಜೆ 5 ಗಂಟೆಗೆ ಡಾ. ಅಂಬೇಡ್ಕರ್‌ ಭವನದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಕೀಲ ಕೆ.ಪಿ.ಶ್ರೀಪಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Morning News - Shimoga city

ಈಡಿಗ ಸಮುದಾಯದ ಸಭೆ

ಪತ್ರಿಕಾ ಭವನ: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಕುರಿತು ನಡೆಸಲು ಉದ್ದೇಶಿಸಿರುವ ಸಮೀಕ್ಷೆಯ ಬಗ್ಗೆ ಜಿಲ್ಲೆಯ ಈಡಿಗ ಸಮುದಾಯದ ದೀವರು 27 ಉಪಪಂಗಡಗಳು ಒಮ್ಮತದ ತೀರ್ಮಾನ ಕೈಗೊಳ್ಳಲು ಸೆ.4ರಂದು ನಗರದ ಜಿಲ್ಲಾ ಈಡಿಗ ಭವನದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಆರ್.ಶ್ರೀಧರ್ ಹುಲ್ತಿಕೊಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Morning News - Shimoga city

ಬಾನು ಮುಷ್ತಾಕ್‌ ಆಯ್ಕೆ ಸೂಕ್ತ

ಪತ್ರಿಕಾ ಭವನ: ಸರ್ಕಾರ ಆಚರಿಸುವ ನಾಡಹಬ್ಬ ದಸರಾಗೆ ಜಾತಿ, ಧರ್ಮ, ಮತವಿಲ್ಲ. ಈ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು. ದಸರಾವನ್ನು ಎಲ್ಲರೂ ಮನೆಯಲ್ಲಿ ಸಾಂಪ್ರದಾಯಿಕವಾಗಿ ಆಚರಿಸುತ್ತಾರೆ. ಮೈಸೂರು ದಸರಾ ರಾಜ್ಯ ಸರ್ಕಾರ ಆಚರಿಸುವ ಹಬ್ಬ. ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರ ಆಯ್ಕೆ ಸೂಕ್ತ ಎಂದು ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Morning News - Shimoga city

Morning News

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment