‘ಕುರಾನ್‌ ಸಂದೇಶವನ್ನು ತಪ್ಪು ತಪ್ಪಾಗಿ ಅರ್ಥೈಸಿದ ಆ ಸಿನಿಮಾ ಬಿಡುಗಡೆ ಮಾಡಬಾರದುʼ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 27 MAY 2024

SHIMOGA : ‘ಹಮ್ ದೋ ಹಮಾರೆ ಭಾರಾ’ ಹಿಂದಿ ಸಿನಿಮಾದಲ್ಲಿ ಕುರಾನ್ ಶರೀಫ್‌ನ ಸಂದೇಶಗಳನ್ನು ತಪ್ಪು ಅರ್ಥ ಬರುವಂತೆ ಚಿತ್ರೀಕರಿಸಲಾಗಿದೆ. ಈ ಸಿನಿಮಾ ಬಿಡುಗಡೆ ಮಾಡಬಾರದು ಎಂದು ಗಾಂಧಿ ಬಜಾರ್‌ನ ಸುನ್ನಿ ಜಾಮಿಯ ಮಸೀದಿಯ ಮೌಲ್ವಿ ಹಜರತ್ ಮೌಲಾನಾ ಅಬ್ದುಲ್ ರಝಾ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನಿಮಾ ಜನರಿಗೆ ಮನರಂಜನೆ ಮತ್ತು ಉತ್ತಮ ಸಂದೇಶ ನೀಡುವುದಿಲ್ಲ. ಇದು ಒಂದು ಸಮುದಾಯದ ವಿರುದ್ಧ ತಪ್ಪು ಸಂದೇಶ ನೀಡುವ ಹುನ್ನಾರ. ಆದ್ದರಿಂದ ಈ ಸಿನಿಮಾ ಬಿಡುಗಡೆ ಮಾಡದಂತೆ ತಡೆಹಿಡಿಯಬೇಕು. ಇಂತಹ ಸಿನಿಮಾಗಳು ಸಾಮಾಜಿಕ ಸ್ವಾಸ್ಥ್ಯ ಹದಗೆಡಿಸಲಿದೆ. ಸಿನಿಮಾದ ಟ್ರೇಲರ್‌ನಲ್ಲಿ ಕುರಾನ್‌ ಸಂದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ – ಕೋಡೂರಿನಲ್ಲಿ ಮದುವೆ ಮುಗಿಸಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

ಸುನ್ನಿ ಜಾಮಿಯಾ ಮಸ್ಜಿದ್‌ನ ಅಧ್ಯಕ್ಷ ಮುನಾವಾರ್‌ ಪಾಷಾ, ಅಶ್ರಫ್‌ ಅಹಮದ್‌, ಸತ್ತಾರ್‌ ಬೇಗ್‌ ಸೇರಿದಂತೆ ಪ್ರಮುಖರು ಇದ್ದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment