ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಹೆಸರನ್ನು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಸಂಸದ ಬಿ.ವೈ. ರಾಘವೇಂದ್ರ ಇಂದು ಭರವಸೆ ನೀಡಿದ್ದಾರೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದ್ದಾರೆ.
ವಿನೋಬನಗರದ ಸಂಸದರ ನಿವಾಸದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸಂಸದ ರಾಘವೇಂದ್ರ ಹೆಸರು ಘೋಷಣೆಯ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರನ್ನು ಘೋಷಣೆ ಬಾಕಿ ಇದೆ. ಎರಡೂವರೆ ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ನಾಲ್ಕು ವಿಮಾನ ನಿಲ್ದಾಣಗಳ ಹೆಸರು ಶಿಫಾರಸು ಮಾಡಿದೆ.
ಕೇಂದ್ರ ಸರ್ಕಾರದಿಂದ ಘೋಷಣೆ ಬಾಕಿ ಇದೆ ಎಂದು ಟ್ರಸ್ಟ್ ಮನವಿಯಲ್ಲಿ ತಿಳಿಸಲಾಗಿದೆ. ಟ್ರಸ್ಟ್ನ ಮುಖಂಡರಾದ ಮೇಘರಾಜ್, ಕಲ್ಲೂರು ಶಂಕ್ರಾನಾಯ್ಕ, ಅಲೀಂಖಾನ್, ಬಸವರಾಜ್, ಕೆ.ಆರ್. ಶಿವಣ್ಣ, ಭ್ರಮೇಶ್ವರ್ ಯುವರಾಜ್ ಇದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ