ಶೈಕ್ಷಣಿಕ ಸಾಲಕ್ಕೆ ಸಿಬಿಲ್‌ ಸ್ಕೋರ್‌ ಸಡಿಲಿಸಿ, ಬ್ಯಾಂಕುಗಳಿಗೆ ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಸೂಚನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಅಬ್ದುಲ್‌ ನಜೀರ್‌ಸಾಬ್‌ ಸಭಾಂಗಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ಏರ್ಪಡಿಸಲಾಗಿದ್ದ ಜಿಲ್ಲಾ ಮಾಸಿಕ ಸಲಹಾ ಸಮಿತಿ ಸಭೆ ನಡೆಯಿತು. ಸಂಸದ ರಾಘವೇಂದ್ರ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಸದ ರಾಘವೇಂದ್ರ ಏನೆಲ್ಲ ಹೇಳಿದರು?

POINT-1

ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಯ ಕನಸು ಸಾಕಾರಗೊಳಿಸುವಲ್ಲಿ ಬ್ಯಾಂಕುಗಳು ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ. ಆದರು ಬ್ಯಾಂಕುಗಳು ಇನ್ನಷ್ಟು ಬಲಿಷ್ಟಗೊಂಡು ರೈತರ ಆದಾಯ ದ್ವಿಗುಣಗೊಳಿಸುವಲ್ಲಿ, ಯುವಕರು ಹೊಸ ಉದ್ಯಮಗಳಲ್ಲಿ ತೊಡಗಿಸಿಕೊಳ್ಳಲು, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಬ್ಯಾಂಕುಗಳು ಮುಂದಾಗಬೇಕು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

POINT-2

ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ನಾಗರೀಕರಿಗೂ ಆರ್ಥಿಕ ಭದ್ರತೆ ದೊರೆಯುವಲ್ಲಿ ಭವಿಷ್ಯದ ಬ್ಯಾಂಕಿಂಗ್‌ ವ್ಯವಸ್ಥೆ ಬಲಿಷ್ಟಗೊಳ್ಳಬೇಕು. ರೈತರ ಆರ್ಥಿಕ ಚಟುವಟಿಕೆಗಳಿಗೆ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸಹಕಾರಿಯಾಗಬೇಕು.

B Y Raghavendra Spoke at DCC DLRC Meeting in Shivamogga

POINT-3

ದೇಶದ ರಾಷ್ಟ್ರೀಕೃತ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕುಗಳ ಮಧ್ಯೆ ಆರೋಗ್ಯಕರ ಸ್ಪರ್ಧೆ ನಡೆದು ಜನಸಾಮಾನ್ಯರಿಗೆ ಆರ್ಥಿಕ ಸೌಲಭ್ಯ ದೊರೆಯಬೇಕು. ರಾಷ್ಟ್ರೀಕೃತ ಬ್ಯಾಂಕುಗಳಿಗೆ ನಿಗದಿಪಡಿಸಲಾಗಿರುವ ಗುರಿ ಅತ್ಯಂತ ಕಡಿಮೆ ಇದೆ. ಜನಸಾಮಾನ್ಯರಿಗೆ ಆರ್ಥಿಕ ಸೌಲಭ್ಯ ಒದಗಿಸುವಲ್ಲಿ ನಿಗದಿತ ಗುರಿ ತಲುಪದಿರುವುದು ಸಮಾಧಾನದ ಸಂಗತಿಯಲ್ಲ. ಮುಂದಿನ ಸಭೆಯಲ್ಲಾದರೂ ನಿರೀಕ್ಷಿತ ಪ್ರಗತಿ ಸಾಧಿಸಬೇಕು.

POINT-4

ಶೈಕ್ಷಣಿಕ ಸಾಲ ನೀಡಿಕೆಯಲ್ಲಿ ಅ‍ಭ್ಯರ್ಥಿಗಳ ಸಿಬಿಲ್‌ ಸ್ಕೋರ್‌ನಲ್ಲಿ ಸಡಿಲಿಕೆ ಮಾಡಬೇಕು. ಬ್ಯಾಂಕಿಂಗ್‌ ವ್ಯವಹಾರಕ್ಕೆ ಇನ್ನಷ್ಟು ಬಲತುಂಬಿ ಜನರಿಗೆ ತಲುಪುವಂತಾಗಬೇಕು. ಸರ್ಕಾರಿ ಯೋಜನೆಗಳು ಸುಲಭವಾಗಿ ಸರಳವಾಗಿ ತಲುಪುವಲ್ಲಿ ಶ್ರಮಿಸಬೇಕು.

POINT-5

ಗೃಹ ಸಾಲ ನೀಡುವಲ್ಲಿಯು ನಿರೀಕ್ಷಿತ ಪ್ರಗತಿ ಕಾಣದಾಗಿದೆ. ಗೋವಿಂದಾಪುರದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ವಸತಿ ಸಂಕೀರ್ಣಗಳಲ್ಲಿ 1200 ಮನೆಗಳು ಮಾತ್ರ ನಿರ್ಮಾಣಗೊಂಡಿವೆ. ಅದರಲ್ಲಿಯೂ 400 ಮನೆಗಳನ್ನು ಮಾತ್ರ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಮನೆಗಳನ್ನು ಹಸ್ತಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ. ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಿ, ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ಇರಬಹುದಾದ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಂಡು ತ್ವರಿತಗತಿಯಲ್ಲಿ ಮನೆಗಳನ್ನು ನಿರ್ಮಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.‌ಹೇಮಂತ್‌, ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಸಂಜೀವ್‌ ಕುಮಾರ್‌, ಆರ್.ಬಿ.ಐ. ಜನರಲ್‌ ಮ್ಯಾನೇಜರ್‌ ಬಾಲುಲ್‌ ಬಾರ್ಡೋಲಿ, ನಬಾರ್ಡ್‌ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಶರತ್‌ ಗೌಡ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.