ಹುತಾತ್ಮ ಯೋಧರಿಗೆ ಅಪಮಾನ, ಶಾಸಕರು ಕ್ಷಮೆ ಕೇಳಬೇಕೆಂದು ರಾಘವೇಂದ್ರ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2023

SHIMOGA : ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ತಕ್ಷಣ ಈ ಹೇಳಿಕೆ ಹಿಂಪಡೆದು ದೇಶದ ಕ್ಷಮೆಯಾಚಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ (BY Raghavendra) ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬ್ರಿಟೀಷರು ಎಂದು, ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ ಎಂದು ಶಾಸಕ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ಇದನ್ನೂ ಓದಿ-ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಖರೀದಿಸಿ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ, ತಡವಾಗಿ ದಾಖಲಾಯ್ತು ಪ್ರಕರಣ

ಅನೇಕ ಬಿಕ್ಕಟ್ಟಿನ ಸಂದರ್ಭ ಕಾಂಗ್ರೆಸ್ ಪಕ್ಷ ದೇಶದ ಹಿತಾಸಕ್ತಿ ಬಲಿ ಕೊಟ್ಟು ಸಣ್ಣತನದ ರಾಜಕೀಯ ಮಾಡಿದೆ. ಈಗ ಹುತಾತ್ಮ ಯೋಧರಿಗೆ ಅಪಮಾನ ಮಾಡಲಾಗಿದೆ‌. ಶಾಸಕ ಬಾಲಕೃಷ್ಣ ತಕ್ಷಣ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment