ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಸಂಸದ ರಾಘವೇಂದ್ರ ಅಭಯ, ಏನಂದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ : ಶರಾವತಿ ಮುಳುಗಡೆ (sharavati river victims) ಸಂತ್ರಸ್ಥರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಸಂತ್ರಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದರು.

Shimoga Nanjappa Hospital

ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂತ್ರಸ್ತರನ್ನು ಕೈಬಿಡುವುದಿಲ್ಲ ಎಂದು ತಿಳಿಸಿದರು.

ಶರಾವತಿ ಸಂತ್ರಸ್ಥರ (sharavati river victims) ಜಮೀನು ಡಿನೋಟಿಫಿಕೇಷನ್ ಸಂಬಂಧ ಗಿರೀಶ್ ಆಚಾರ್ ಎಂಬುವವರು ಸಲ್ಲಿಸಿದ್ದ ರಿಟ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ರೈತರ ವಿರುದ್ಧವಾಗಿ ತೀರ್ಪು ನೀಡಿದೆ. ಕೇಂದ್ರದ ಒಪ್ಪಿಗೆ ಪಡೆದು ನ್ಯಾಯಾಲಯಕ್ಕೆ ಹೋಗಬೇಕಿತ್ತು. ಆದರೆ, ಅಧಿಕಾರಿಗಳ ತಪ್ಪಿನಿಂದ ರೈತರು ಆತಂಕಪಡುವ ಹಾಗೆ ಆಗಿದೆ ಎಂದು ತಿಳಿಸಿದರು.

(sharavati river victims)

ಶರಾವತಿ ಭಾಗದ ರೈತರು ತಮ್ಮ ಜಮೀನುಗಳನ್ನು ನೀಡಿ ಕತ್ತಲೆಯಲ್ಲಿದ್ದಾರೆ. ಆಗಿನ ಸರ್ಕಾರ ರೈತರಿಗೆ ಭೂಮಿ ಹಕ್ಕು ಕೊಡಬೇಕಿತ್ತು. 1980ರ ಒಳಗೆ ಅರಣ್ಯ ಸಂರಕ್ಷಣೆ ಕಾಯ್ದೆ ಅಡಿ ಸಂತ್ರಸ್ಥರ ಸಮಸ್ಯೆ ಬಗೆಹರಿಸಬಹುದಿತ್ತು. ಸರ್ಕಾರ ಸಂತ್ರಸ್ಥರ ಪರವಾಗಿ ತೀರ್ಮಾನ ತೆಗೆದುಕೊಂಡರೂ ಅದನ್ನು ಗೆಜೆಟ್ ಗೆ ತರಲಿಲ್ಲ. ಪುನಃ 2016 ರಲ್ಲಿ ಡಿನೋಟಿಫೈ ಮಾಡಿತ್ತು. ಆದರೆ, ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಇರುವುದರಿಂದ ಈಗ ಡಿನೋಟಿಫೀಕೇಷನ್ ರದ್ದಾಗಿದೆ ಎಂದರು.

ಈಗಿನ ಅಧಿಕಾರಿಗಳ, ಆಗಿನ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈ ಆದೇಶ ಬಂದಿದೆ. ರೈತರು ಭಯಪಡುವ ಅಗತ್ಯವಿಲ್ಲ. ದೆಹಲಿಯಲ್ಲಿ ಕೃಷಿ ಮತ್ತು ಅರಣ್ಯ ಸಚಿವರ ಜೊತೆ ಮಾತನಾಡುತ್ತೇನೆ. ಕೇಂದ್ರದ ಒಪ್ಪಿಗೆ ಪಡೆದು ಸಂತ್ರಸ್ಥರ ಜಾಗ ಉಳಿಸಿಕೊಡುತ್ತೇನೆ. ಸಾಗುವಳಿ ಮಾಡುತ್ತಿರುವ ಸಂತ್ರಸ್ಥ ರೈತರ ಜಮೀನನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ ಎಂದು ಸಂಸದ ರಾಘವೇಂದ್ರ ಭರವಸೆ ನೀಡಿದರು.

ರೈತರಾದ ಸುಬ್ಬಣ್ಣ, ಸುಧಾಕರ್, ಕೃಷ್ಣಮೂರ್ತಿ, ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಸೇರಿದಂತೆ ಹಲವರು ಇದ್ದರು.

jnnce college engineering

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ನೂತನ ಮೇಯರ್, ಉಪ ಮೇಯರ್ ಆಯ್ಕೆಗೆ ದಿನಾಂಕ ನಿಗದಿ, ಯಾವಾಗ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment