ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 9 JUNE 2023
SHIMOGA : ವಿಮಾನ ನಿಲ್ದಾಣ (Airport) ಉದ್ಘಾಟನೆಯಾಗಿ ಮೂರು ತಿಂಗಳಾದರು ವಿಮಾನ ಹಾರಾಟ ಆರಂಭವಾಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಇಂಡಿಗೋ ಸಂಸ್ಥೆಯ ವಿಳಂಬ ಧೋರಣೆ ವಿರುದ್ಧ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ವಿಮಾನಯಾನ ಸಂಸ್ಥೆಗೆ ವಾರ್ನಿಂಗ್ ನೀಡಿರುವುದಾಗಿ ತಿಳಿಸಿದರು.

ಕುವೆಂಪು ರಂಗಮಂದಿರದಲ್ಲಿ ನೆಹರು ಯುವ ಕೇಂದ್ರ, ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ, ಎಟಿಎನ್ಸಿ ಕಾಲೇಜು ವತಿಯಿಂದ ಆಯೋಜಿಸಿದ್ದ ಯುವ ಉತ್ಸವದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದರು.
ಸಂಸದರು ಹೇಳಿದ್ದೇನು?
ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ, ಯಶವಂತಪುರ ಎಕ್ಸ್ಪ್ರೆಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್, ರೈಲ್ವೆ ಇಲಾಖೆಯಿಂದ ಆದೇಶ
ಈಗ ಇಂಡಿಗೋ ಸಂಸ್ಥೆ ದುರಾಸೆ ಮಾಡುತ್ತಿದೆ. ಶಿವಮೊಗ್ಗ – ಬೆಂಗಳೂರು ಮಾರ್ಗವನ್ನು ಉಡಾನ್ ಯೋಜನೆ ಅಡಿ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಸಬ್ಸಿಡಿ ಹೆಚ್ಚಳವಾಗಲಿದೆ. ಇನ್ನೂ ಒಂದೆರಡು ಕೋಟಿ ರೂ. ಸಬ್ಸಿಡಿ ಸಿಗಲಿದೆ ಎಂಬ ಲೆಕ್ಕಾಚಾರ. ಆದರೆ ರಾಜಧಾನಿಗಳಿಗೆ ಉಡಾನ್ ಯೋಜನೆ ನೀಡುವುದಿಲ್ಲ. ವಿಮಾನ ಹಾರಾಟ ತಕ್ಷಣದಿಂದ ಆರಂಭವಾಗಬೇಕು ಎಂದು ಈಗಾಗಲೆ ವಾರ್ನಿಂಗ್ ನೀಡಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ ನೆಟ್ಟಿಗರು, ಏನೇನು ಪ್ರಶ್ನೆ ಕೇಳಿದ್ದಾರೆ?
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿLATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






