ಶಿವಮೊಗ್ಗ ವಿಮಾನ ನಿಲ್ದಾಣ, ಇಂಡಿಗೋ ಸಂಸ್ಥೆಗೆ ವಾರ್ನಿಂಗ್‌ ನೀಡಿದ ಎಂಪಿ, ವಿಳಂಬಕ್ಕೆ ಕಾರಣ ಬಯಲು, ಏನದು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE | 9 JUNE 2023

SHIMOGA : ವಿಮಾನ ನಿಲ್ದಾಣ (Airport) ಉದ್ಘಾಟನೆಯಾಗಿ ಮೂರು ತಿಂಗಳಾದರು ವಿಮಾನ ಹಾರಾಟ ಆರಂಭವಾಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಇಂಡಿಗೋ ಸಂಸ್ಥೆಯ ವಿಳಂಬ ಧೋರಣೆ ವಿರುದ್ಧ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ವಿಮಾನಯಾನ ಸಂಸ್ಥೆಗೆ ವಾರ್ನಿಂಗ್‌ ನೀಡಿರುವುದಾಗಿ ತಿಳಿಸಿದರು.

Shimoga MP BY Raghavendra in Kuvempu Rangamandira.

ಕುವೆಂಪು ರಂಗಮಂದಿರದಲ್ಲಿ ನೆಹರು ಯುವ ಕೇಂದ್ರ, ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ, ಎಟಿಎನ್‌ಸಿ ಕಾಲೇಜು ವತಿಯಿಂದ ಆಯೋಜಿಸಿದ್ದ ಯುವ ಉತ್ಸವದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದರು.

ಸಂಸದರು ಹೇಳಿದ್ದೇನು?

ಪ್ರಧಾನಿಯೆ ಶಿವಮೊಗ್ಗ ವಿಮಾನ ನಿಲ್ದಾಣದ (Airport) ಉದ್ಘಾಟನೆ ಮಾಡಿದ್ದಾರೆ. ಆದರೆ ವಿಮಾನ ಹಾರಾಟ ಆರಂಭವಾಗಿಲ್ಲ. ಈಗಾಗಲೆ ಇಂಡಿಗೋ ವಿಮಾನಯಾನ ಸಂಸ್ಥೆಯೊಂದಿಗೆ ಒಪ್ಪಂದವಾಗಿದೆ. ಪ್ರತಿ ಸೀಟ್‌ಗೆ 500 ರೂ. ಸಬ್ಸಿಡಿ ನೀಡಲಾಗುತ್ತಿದೆ. ಅದರಂತೆ ಒಂದು ವರ್ಷಕ್ಕೆ ಎರಡೂವರೆ ಕೋಟಿ ರೂ. ಸಬ್ಸಿಡಿಯನ್ನು ಘೋಷಿಸಲಾಗಿದೆ.ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ, ಯಶವಂತಪುರ ಎಕ್ಸ್‌ಪ್ರೆಸ್‌ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌, ರೈಲ್ವೆ ಇಲಾಖೆಯಿಂದ ಆದೇಶ

ಈಗ ಇಂಡಿಗೋ ಸಂಸ್ಥೆ ದುರಾಸೆ ಮಾಡುತ್ತಿದೆ. ಶಿವಮೊಗ್ಗ – ಬೆಂಗಳೂರು ಮಾರ್ಗವನ್ನು ಉಡಾನ್‌ ಯೋಜನೆ ಅಡಿ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಸಬ್ಸಿಡಿ ಹೆಚ್ಚಳವಾಗಲಿದೆ. ಇನ್ನೂ ಒಂದೆರಡು ಕೋಟಿ ರೂ. ಸಬ್ಸಿಡಿ ಸಿಗಲಿದೆ ಎಂಬ ಲೆಕ್ಕಾಚಾರ. ಆದರೆ ರಾಜಧಾನಿಗಳಿಗೆ ಉಡಾನ್‌ ಯೋಜನೆ ನೀಡುವುದಿಲ್ಲ. ವಿಮಾನ ಹಾರಾಟ ತಕ್ಷಣದಿಂದ ಆರಂಭವಾಗಬೇಕು ಎಂದು ಈಗಾಗಲೆ ವಾರ್ನಿಂಗ್‌ ನೀಡಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಮೋದಿಯನ್ನು ಟ್ಯಾಗ್‌ ಮಾಡಿ ಪ್ರಶ್ನಿಸಿದ ನೆಟ್ಟಿಗರು, ಏನೇನು ಪ್ರಶ್ನೆ ಕೇಳಿದ್ದಾರೆ?

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

Leave a Comment