ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ಬೆಟಾಲಿಯನ್ ಸ್ಥಾಪನೆ ಮಾಡಲಾಗುತ್ತಿದೆ. ಜನವರಿ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಾಯಿತು.
ಸ್ಥಳ ಪರಿಶೀಲನೆ, ಸಲಹೆ, ಸೂಚನೆ
ಬೆಳಗ್ಗೆ ಬುಳ್ಳಾಪುರಕ್ಕೆ ತೆರಳಿದ್ದ ಸಂಸದ ಬಿ.ವೈ.ರಾಘವೇಂದ್ರ, ಗುದ್ದಲಿ ಪೂಜೆ ನೆರವೇರಿಸುವ ಸ್ಥಳ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಪರಿಶೀಲನಾ ಕಾರ್ಯ ನಡೆಸಲಾಯಿತು. ಕಾರ್ಯಕ್ರಮದ ಗುದ್ದಲಿ ಪೂಜೆ ಸ್ಥಳ, ವೇದಿಕೆ ನಿರ್ಮಾಣದ ಕುರಿತು ಚರ್ಚಿಸಲಾಯಿತು.
ಒಂದೂವರೆ ಗಂಟೆ ಇರ್ತಾರೆ ಅಮಿತ್ ಷಾ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಜನವರಿ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಬುಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಸಮಯ ನಿಗದಿಯಾಗಿದೆ ಎಂದು ತಿಳಿಸಿದರು.
ಐದು ರಾಜ್ಯಕ್ಕೆ ಆರ್‌ಎಎಫ್
ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ಬೆಟಾಲಿಯನ್ ಸ್ಥಾಪನೆ ಮಾಡಲಾಗುತ್ತಿದೆ.
ದಕ್ಷಿಣ ಭಾರತದ ಪ್ರಮುಖ ಬೆಟಾಲಿಯನ್‍ಗಳಲ್ಲಿ ಇದು ಒಂದಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ತುರ್ತು ಸಂದರ್ಭಗಳಾದ ಭೂಕಂಪ, ನೆರೆ ಹಾವಳಿ, ಕೋಮು ಗಲಭೆ ವೇಳೆ ಅಂಧ್ರ, ತಮಿಳುನಾಡಿನಿಂದ ಆರ್‌ಎಎಫ್ ತುಕಡಿ ಕರೆಯಿಸಿಕೊಳ್ಳಬೇಕಿತ್ತು.
ಕರ್ನಾಟಕದ 30 ಜಿಲ್ಲೆಗಳಲ್ಲಿ ತುರ್ತು ಸಂದರ್ಭದಲ್ಲಿ ಅಗತ್ಯವಿದ್ದರೆ ಭದ್ರಾವತಿಯಿಂದಲೇ ಆರ್‌ಎಎಫ್ ತುಕಡಿಗಳನ್ನು ರವಾನಿಸಲಾಗುತ್ತದೆ ಎಂದು ರಾಘವೇಂದ್ರ ತಿಳಿಸಿದರು.
ತಮಿಳುನಾಡು, ಗೋವಾ, ಪುದುಚೇರಿ ಸೇರಿ ಐದು ರಾಜ್ಯಗಳಿಗೆ ಇದುವೇ ಕೇಂದ್ರವಾಗಲಿದೆ.
ಬುಳ್ಳಾಪುರದಲ್ಲಿ ಆರ್‌ಎಎಫ್ ಟೌನ್ ಶಿಪ್ ನಿರ್ಮಾಣವಾಗಲಿದೆ. ಸುಮಾರು ನಾಲ್ಕು ಸಾವಿರ ಕುಟುಂಬಗಳು ಇಲ್ಲಿ ವಾಸಿಸಲಿವೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]