ಶಿವಮೊಗ್ಗಕ್ಕೆ ಸಂಸದ ತೇಜಸ್ವಿ ಸೂರ್ಯ, ಹರ್ಷ ಹತ್ಯೆಗೆ ಆಕ್ರೋಶ

Published On : ಫೆಬ್ರವರಿ 22, 2022

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022

ಹರ್ಷನ ಹತ್ಯೆಯನ್ನು ಕೊಲೆಯಾಗಿ ಪರಿಗಣಿಸಬಾರದು. ಇದೊಂದು ಭಯೋತ್ಪಾದಕ ಕೃತ್ಯ ಎಂದು ಪ್ರಕರಣ ದಾಖಲು ಮಾಡಬೇಕು ಎಂದು ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಆಗ್ರಹಿಸಿದರು.

Shimoga Nanjappa Hospital Testing List

ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸಂಸದ ತೇಜಸ್ವಿ ಸೂರ್ಯ ಸುದ್ದಿಗಾರರೊಂದಿಗೆ ಮಾತನಾಡಿದರು. ಇಂತಹ ಸಾವು ಮರುಕರಳಿಸದಂತೆ ನೋಡಿಕೊಳ್ಳಬೇಕು. ಹರ್ಷ ಹಿಂದುತ್ವಕ್ಕಾಗಿ ಬದುಕಿದ ಹುಡುಗ. ಹಿಂದೂ ಸಮಾಜದ ಸೇವೆ ಮಾಡಬೇಕು ಎನ್ನುವ ಹುಡುಗರನ್ನು ಹತ್ಯೆ ಮಾಡಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದರು.  

ಕಾಂಗ್ರೆಸ್ ಸರ್ಕಾರ ಇದ್ದಾಗ ಹಿಂದೂ ಕಾರ್ಯಕರ್ತರ ಹತ್ಯೆ ಸಂದರ್ಭ ಎಫ್‌ಐಆರ್ ಬದಲಿಸುವ ಪ್ರಯತ್ನಗಳಾಗಿವೆ. ನಮ್ಮದು ಹರಾಮ್ ಸರ್ಕಾರ ಅಲ್ಲ. ರಾಜ್ಯದಲ್ಲಿ ಈಗ ಇರುವುದು ಹಿಂದುತ್ವದ ಆಧಾರದ ಮೇಲೆ ಇರುವ ಸರ್ಕಾರ. ಹಾಗಾಗಿ ಈ ಪ್ರಕರಣದಲ್ಲಿ ಭಾಗಿಯಾದವರನ್ನು ಹುಡುಕಿ ಗಲ್ಲಿಗೇರಿಸುವ ಕೆಲಸ ಮಾಡುತ್ತದೆ ಎಂದರು.

ಇದನ್ನೂ ಓದಿ | ಹರ್ಷ ಕುಟುಂಬಕ್ಕೆ ಒಂದು ಲಕ್ಷದ ಚೆಕ್ ವಿತರಣೆ

Shimoga Live Age Wise Reach

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 22, 2022

Leave a Comment