ಶಿವಮೊಗ್ಗ ಲೈವ್.ಕಾಂ | SHIMOGA NEWS | 1 NOVEMBER 2020
ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ರಿಂಗ್ ರಸ್ತೆ ಕಾಮಗಾರಿಯ ಪರಿಶೀಲನೆ ನಡೆಸಿದರು. ರೈಲ್ವೆ ನಿಲ್ದಾಣದ ಮುಂದೆ ರಿಂಗ್ ನಡೆಯುತ್ತಿರುವ ಕಾಮಗಾರಿ ಒಂದೂವರೆ ತಿಂಗಳಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದರು.
VIDEO REPORT
ಕೆಇಬಿ ಸರ್ಕಲ್ ಕಡೆಯಿಂದ ಕಾಮಗಾರಿ ಪರಿಶೀಲನೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ನಿಲ್ದಾಣದ ಕಡೆಯಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ಅಪ್ರೋಚ್ ರಸ್ತೆಯ ಪರಿಶೀಲಿಸಿದರು. ಕೆಲವು ಮಾರ್ಪಾಡು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಿಂಗ್ ರಸ್ತೆಯ ಚರಂಡಿ ಕಾಮಗಾರಿ, ಫಲಾನುಭವಿಗಳಿಗೆ ಪರಿಹಾರ ವಿತರಣೆ, ರೈಲ್ವೆ ಇಲಾಖೆ ವಸತಿಗೃಹದಿಂದ ರೈಲು ನಿಲ್ದಾಣಕ್ಕೆ ಬರುವ ಮಾರ್ಗದ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆ ಚರ್ಚಿಸಿದರು. ಕೋವಿಡ್ ಲಾಕ್ಡೌನ್ ಮತ್ತು ಮಳೆಗಾಲದಿಂದಾಗಿ ಕಾಮಗಾರಿ ವಿಳಂಬವಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ರಿಂಗ್ ರಸ್ತೆ ಸಿದ್ಧವಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಉಪವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]