ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶಿವಮೊಗ್ಗ ನಗರಕ್ಕೆ ಹೊಂದಿಕೊಂಡ ಹಾಗೆ ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್’ಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿಗಳ ಪರಿಶೀಲನೆ ಕಾರ್ಯ ನಡೆಸಿದರು.
ಎಲ್ಲೆಲ್ಲೆ ಪರಿಶೀಲನೆ ನಡೆಸಿದರು?
ಶಿವಮೊಗ್ಗದಲ್ಲಿ 165 ಕೋಟ ರೂ. ವೆಚ್ಚದಲ್ಲಿ ನಾಲ್ಕು ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಇವತ್ತು ಸಂಸದ ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ – ಭದ್ರಾವತಿ ರಸ್ತೆಯ ಕಡದಕಟ್ಟೆ, ಶಿವಮೊಗ್ಗದ ವಿದ್ಯಾನಗರ, ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಂ ಸಮೀಪ ಮತ್ತು ಕಾಶೀಪುರದಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಕಾಮಗಾರಿ ಸ್ಥಳಕ್ಕೆ ಸಂಸದ ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿದರು.
ಏನೆಲ್ಲ ಸೂಚನೆ ನೀಡಿದರು?
ಕಾಮಗರಿ ಸ್ಥಳ ಪರಿಶೀಲನೆ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಕಾಮಗಾರಿ ಕುರಿತು ಮಾಹಿತಿ ನೀಡಿದರು.
» ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಅಂದಾಜು ವೆಚ್ಚ 116.31 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಕಾಮಗಾರಿಯ ವೆಚ್ಚದ ಶೇ. 50 ರಷ್ಟು ಹಾಗೂ ಭೂಸ್ವಾಧೀನದ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವು ಭರಿಸಲಿದೆ.
» ಈ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ 70.05 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದೆ. ರೈಲ್ವೆ ಇಲಾಖೆಗೆ ರಾಜ್ಯ ಸರ್ಕಾರದಿಂದ ಈಗಾಗಲೇ 8.61 ಕೋಟಿ ರೂ. ಹಾಗೂ ಭೂಸ್ವಾಧೀನಕ್ಕಾಗಿ 20.60 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
» ರೈಲ್ವೆ ಇಲಾಖೆಯು ಈ ಮೂರು ಕಾಮಗಾರಿಗಳನ್ನು ನಿರ್ಮಾಣ ಕಂಪನಿಗೆ (ಎಸ್.ಆರ್.ಸಿ. ಕಂಪನಿ) ಗುತ್ತಿಗೆ ನೀಡಿದೆ. ಈಗಾಗಲೇ ಮೂರು ಕಾಮಗಾರಿಗಳು ಭರದಿಂದ ಜರಗುತ್ತಿದೆ.
» ಮು೦ದಿನ 10 ರಿಂದ 12 ತಿಂಗಳುಗಳಲ್ಲಿ ಕಾಮಗಾರಿಯನ್ನು ಪೂರ್ಣ ಮಾಡಲಾಗುವುದು ಹಾಗೂ ಜಿಲ್ಲಾಡಳಿತವು ಭೂಸ್ವಾಧೀನ ಹಾಗೂ ಯುಟಿಲಿಟಿ ಷಿಪ್ಟಿಂಗ್’ಗಾಗಿ ಅಗತ್ಯ ಕ್ರಮವನ್ನು ಕೈಗೊಂಡಿದ್ದು, ಶೀಘ್ರದಲ್ಲಿಯೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ,
» ಕಾಶಿಪುರ ಹಾಗೂ ಸವಳ೦ಗ ರಸ್ತೆ ಮೇಲ್ವೇತುವೆಗಳಲ್ಲಿ ನಾಗರೀಕರಿಗೆ ನೆರವಾಗುವ ದೃಷ್ಟಿಯಿಂದ Under Pass ನ್ನು ಸಹ ನಿರ್ಮಿಸಲು ನಿರ್ಧರಿಸಲಾಗಿದೆ.
» ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ 49ರ ಬದಲಿಗೆ 60.76 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಕೆಳಸೇತುವೆ ನಿರ್ಮಾಣವಾಗಲಿದೆ.
» ಶಿವಮೊಗ್ಗ ನಗರದ ಕಾಶಿಪುರ ರೈಲ್ವೆ ಲೆವೆಲ್ ಕ್ರಾಸಿಂಗ್ 52ರ ಬದಲಿಗೆ 29.63 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಪಿ.ಟಿ. ಕಾಲೋನಿಗೆ ಹೋಗುವ ರಸ್ತೆಯಲ್ಲಿನ ರೈಲ್ವೆ ಲೆವೆಲ್ ಕ್ರಾಸಿಂಗ್ಗೆ ರೈಲ್ವೆ ಕೆಳಸೇತುವೆ ನಿರ್ಮಾಣ ಮಾಡಲಾಗುತ್ತಿದೆ.
» ಭದ್ರಾವತಿ ನಗರದ ಕಡದಕಟ್ಟೆ ಬಳಿ ಇರುವ ರೈಲ್ವೆ ಲೆವೆಲ್ ಕ್ರಾಸಿಂಗ್ 34ರ ಬದಲಿಗೆ 25.92 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ನಿರ್ಮಾಣವಾಗುತ್ತಿದೆ.
» ಶಿವಮೊಗ್ಗ ನಗರದ ವಿದ್ಯಾನಗರ ಬಳಿ 43.90 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ವೃತ್ತಕಾರದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಪೊಲೀಸ್ ಅಧೀಕ್ಷಕರಾದ ಬಿ. ಎಂ. ಲಕ್ಷ್ಮಿ ಪ್ರಸಾದ್. ರೈಲ್ವೆ ಅಧಿಕಾರಿ ಶ್ರೀಧರ್ ಮೂರ್ತಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮಗಾರಿ ಪರಿಶೀಲೆಗೆ ತೆರಳಿದ್ದ ಸಂದರ್ಭ ರೈಲ್ವೆ ಅಧಿಕಾರಿ ಶ್ರೀಧರಮೂರ್ತಿ, ಆಂಜನೇಯ ಪ್ರಸಾದ್, ಮುಖ್ಯ ಇಂಜಿನಿಯರ್ ಪ್ರಭಾಕರನ್, ವಿಜಯ್ ಭಾಸ್ಕರ್, ರಾಜ ಕುಮಾರ್, ಬಸವರಾಜಪ್ಪ, ಶಶಿ ತಿವಾರಿ, ಪ್ರಾಜೆಕ್ಟ್ ಮ್ಯಾನೇಜರ್ ಸುಧೀರ್, ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ, ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆಯ ಸದಸ್ಯರು, ಸ್ಥಳಿಯ ಮುಖಂಡರು ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ | ‘ಈ ರೈಲ್ವೆ ಯೋಜನೆಗೆ ಕಲ್ಲು ಹಾಕುವ ಕೆಲಸ ಮಾಡಿದರೆ ಸುಮ್ಮನಿರಲ್ಲ’
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422